Wednesday, January 22, 2025
ಸುದ್ದಿ

ಕೊಣಾಜೆ ಗ್ರಾಮದ ಯುವಕ ಕೆರೆಗೆ ಹಾರಿ ಆತ್ಮಹತ್ಯೆ – ಕಹಳೆ ನ್ಯೂಸ್

ಮಂಗಳೂರು ; ಬಾಲಚಂದ್ರ ಎಂಬ ಯುವಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆ ಗ್ರಾಮದ ಹಾಲಾಡಿ ದಿ.ಶೇಷಪ್ಪ ಗೌಡ ಎಂಬವರ ಪುತ್ರ ಬಾಲಚಂದ್ರ ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಬಾಲಚಂದ್ರ ನಾಲ್ಕು ದಿನಗಳ ಹಿಂದೆಯಷ್ಟೇ ಮನೆಗೆ ಬಂದಿದ್ದರು. ನವೆಂಬರ್ ತಿಂಗಳಿನಲ್ಲಿ ಮದುವೆ ನಿಗದಿಯಾಗಿದ್ದು, ಶನಿವಾರದಂದು ಮನೆಯಲ್ಲಿದ್ದ ಇವರು ತನ್ನ ಸಹೋದರನ ಮನೆಗೆ ಹೋಗುವ ದಾರಿಯಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ ನೀಲಮ್ಮ ಹಾಗೂ ಮೂವರು ಸಹೋದರರು, ಓರ್ವ ಸಹೋದರಿಯನ್ನು ಅಗಲಿದ್ದಾರೆ. ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮೃತರ ಸಹೋದರ ವಾಸುದೇವ ಅವರು ಉಪ್ಪಿನಂಗಡಿ ಪೋಲಿಸರಿಗೆ ದೂರು ನೀಡಿದ್ದಾರೆ.