Tuesday, January 21, 2025
ಸುದ್ದಿ

ಬಿಸಿರೋಡಿನ ಸ್ತ್ರೀ ಶಕ್ತಿ ಸಭಾ ಭವನದಲ್ಲಿ ನಡೆದ ಚಿತ್ರಕಲಾ ಸ್ಪರ್ಧೆ –ಕಹಳೆ ನ್ಯೂಸ್

ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕು ಭಾಲಭವನ ಸಮಿತಿ ಬಂಟ್ವಾಳ ಇವರ ಸಂಯುಕ್ತ ಆಶ್ರಯ ದಲ್ಲಿ ಗಾಂಧಿ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ ಬಿಸಿರೋಡಿನ ಸ್ತ್ರೀ ಶಕ್ತಿ ಸಭಾ ಭವನದಲ್ಲಿ ಶನಿವಾರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ವಹಿಸಿದ್ದರು. ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡಿ, ವಿದ್ಯಾರ್ಥಿಗಳ ದೇಶದ ಚರಿತ್ರೆಯನ್ನು ತಿಳಿದುಕೊಂಡು ಉತ್ತಮ ಪ್ರಜೆಗಳಾಗಿ, ಗಾಂಧಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ ಎಂದು ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಜೇತ ಮಕ್ಕಳಿಗೆ ಪ್ರಶಂಸನಾ ಪತ್ರನೀಡಿದ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ ಮಾತನಾಡಿ ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಬಹಳ ಮುಖ್ಯ ಸೋಲು, ಗೆಲುವು ಮುಖ್ಯವಲ್ಲ ಎಂದರು. ವೇದಿಕೆಯಲ್ಲಿ ತಾ.ಪಂ.ಮುಖ್ಯಕಾರ್ಯನಿರ್ವಣಾಧಿಕಾರಿ ರಾಜಣ್ಣ , ಸಂಪನ್ಮೂಲ ವ್ಯಕ್ತಿಗಳಾದ ಮುರಳಿಕೃಷ್ಣ, ಚೆನ್ನಕೇಶವ, ಮುರಳೀಧರ್, ಮೇಲ್ವಿಚಾರಕಿಯರಾದ ಶಾಲಿನಿ, ನೀತಾಕುಮಾರಿ, ಸಿಂದೂ, ಇಂದಿರಾ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು