Monday, January 20, 2025
ಸುದ್ದಿ

ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ-ಕಹಳೆ ನ್ಯೂಸ್

ಸಂತ್ರಸ್ತ ಯುವತಿ ಹಾಗೂ ಆರೋಪಿ ಮಂಗಳೂರು ಮಲ್ಲೂರು ನಿವಾಸಿ ಮೊಹಮ್ಮದ್ ಅಝರುದ್ದಿನ್ ಎಂಬವನ ನಡುವೆ ಕಳೆದ ಕೆಲ ವರ್ಷಗಳಿಂದ ಸ್ನೇಹ ಹುಟ್ಟಿಕೊಂಡಿತ್ತು. ಆದರೆ ಆರೋಪಿಯು ಮದುವೆಯಾಗುವುದಾಗಿ ನಂಬಿಸಿ ಸಂತ್ರಸ್ತ ಯುವತಿಗೆ ಒತ್ತಾಯಪೂರ್ವಕವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದು, ಆನಂತರ ಆರೋಪಿಯು ಮದುವೆಗೆ ನಿರಾಕರಿಸಿದ್ದಾನೆ.

ಅಷ್ಟೇ ಅಲ್ಲದೇ ಸಂತ್ರಸ್ತ ಯುವತಿಯೊಂದಿಗೆ ಇರುವ ಪೋಟೊವನ್ನು ಸಾಮಾಜಿಕ ಜಾಲತಾಣಗಲ್ಲಿ ಶೇರ್ ಮಾಡುವುದಾಗಿ ಯುವತಿಗೆ ಬೆದರಿಕೆ ನೀಡುತ್ತಿದ್ದ. ಇದರಿಂದ ನೊಂದ ಸಂತ್ರಸ್ತ ಯುವತಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅದರಂತೆ ಆರೋಪಿಯನ್ನು ಪೊಲೀಸರು ವಶಪಡಿಸಿಕೊಂಡು ನ್ಯಾಯಾಲಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನದಲಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು