Recent Posts

Sunday, January 19, 2025
ಸುದ್ದಿ

ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನ ಮಂದಿರದಲ್ಲಿ ನವರಾತ್ರಿ ಉತ್ಸವ ಸಂಪನ್ನ ; ಧಾರ್ಮಿಕ ಸಭೆ, ಸಮ್ಮಾನ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನ ಮಂದಿರದಲ್ಲಿ ನಡೆದ 15ನೇ ವರ್ಷದ ನವರಾತ್ರಿ ಉತ್ಸವವು ಅ. 7ರಂದು ಸಂಪನ್ನಗೊಂಡಿತು.

ಸೆ.29 ರಿಂದ ಅ. 7 ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಬಹಳ ವಿಜೃಂಭಣೆಯಿಂದ ಜರುಗಿತು. ಪ್ರತಿದಿನ ಸಂಜೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ವೇ.ಮೂ. ಹರಿಪ್ರಸಾದ್ ಭಟ್ ಬನಾರಿ ಅವರ ನೇತ್ರೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.
ಅ. 7ರಂದು ನಡೆದ ಧಾರ್ಮಿಕ ಸಭೆಯಲ್ಲಿ ವಾಸ್ತು ತಜ್ಞ, ಪುತ್ತೂರು ನಗರ ಸಭೆಯ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾವುದೇ ಪ್ಲಾಸ್ಟಿಕ್ ಚೀಲಗಳನ್ನು ಬಳಸದೆ ಸ್ವಚ್ಛ ಭಾರತದ ಕನಸನ್ನು ನನಸು ಮಾಡುವ ಪ್ರಯತ್ನಗಳನ್ನು ಮಾಡಿದ್ದಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಧಾರ್ಮಿಕ ಉಪನ್ಯಾಸವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ಮಂಗಳೂರು ವಿಭಾಗದ ವಿದ್ಯಾರ್ಥಿ ಪ್ರಮುಖ್ ಕೆ. ಮನಿಷಾ ಶೆಟ್ಟಿ ನಡೆಸಿ ನವರಾತ್ರಿ ಉತ್ಸವದ ಸಂದರ್ಭದಲ್ಲಿ ನವದುರ್ಗೆಗಳ ಅವತಾರಗಳನ್ನು ಆರಾಧÀನೆ ಮಾಡುವುದರಿಂದ ಆಗುವ ಪ್ರಯೋಜನವನ್ನು ತಿಳಿಸಿದರು. ಅಲ್ಲದೆ ಸಂಸ್ಕಾರ, ಸಂಸ್ಕøತಿ, ಗುರು-ಹಿರಿಯರನ್ನು ಮತ್ತು ಹೆತ್ತವರನ್ನು ಗೌರವಿಸುವ ಮೂಲಕ ಭಾರತೀಯ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲರ ಕರ್ತವ್ಯ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವೇದಿಕೆಯಲ್ಲಿ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಶಶಾಂಕ ಜೆ.ಕೊಟೇಚ, ಪಡ್ನೂರು ಕುಂಜಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸುರೇಂದ್ರ ಪಡ್ಡಾಯೂರು, ಆಟಿಕ್ಕೊರುದ್ರ-ನೇತ್ರ-ಮಿತ್ರವೃಂದದ ಅಧ್ಯಕ್ಷ ದಿವಾಕರ ಪೂಜಾರಿ ನೆಲಪ್ಪಾಡಿ, ಭಜನಾ ಮಂದಿರದ ಗೌರವಾಧ್ಯಕ್ಷ ನಾರಾಯಣ ಪೂಜಾರಿ ನೆಲಪ್ಪಾಡಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಮ್ಮಾನ :
ನವರಾತ್ರಿ ಉತ್ಸವದ ಯಶಸ್ವಿಗೆ ಸಹಕರಿಸಿದ ಭಜನಾ ಮಂದಿರದ ಮಾಜಿ ಅಧ್ಯಕ್ಷ ಮೋಹನ್ ಎನ್. ಪಡ್ಡಾಯೂರು ಮತ್ತು ಭಜನಾ ಮಂದಿರದ ಸದಸ್ಯ ಕುಶಾಲಪ್ಪ ಪೂಜಾರಿ ಅವರನ್ನು ಸಮ್ಮಾನಿಸಲಾಯಿತು.
ವೈಭವಿ ಮಲ್ತೋಟ್ಟೆ ಮತ್ತು ಅನುಶ್ರೀ ಪಡ್ಡಾಯೂರು ಪ್ರಾರ್ಥಿಸಿದರು. ಭಜನಾ ಮಂದಿರದ ಕಾರ್ಯದರ್ಶಿ ಬಾಲಕೃಷ್ಣ ಪಡ್ಡಾಯೂರು ಸ್ವಾಗತಿಸಿದರು, ಭಜನಾ ಮಂದಿರದ ಅಧ್ಯಕ ಹರೀಶ್ ನಾಯ್ಕ ಮೊಲ್ತೋಟ್ಟೆರವರು ಪ್ರ್ರಾಸ್ತಾವಿಕವಾಗಿ ಮಾತನಾಡಿದರು. ಭಜನಾ ಮಂದಿರದ ಮಾಜಿ ಅಧ್ಯಕ್ಷರಾದ ಶಿವರಾಮ ನೆಲಪ್ಪಾಲು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.