Monday, January 20, 2025
ರಾಜಕೀಯ

ಉಪಚುನಾವಣೆಯಲ್ಲಿ ಎಲ್ಲಾ 15 ಸ್ಥಾನಗಳನ್ನು ಬಿಜೆಪಿ ಭಾರಿ ಅಂತರದಿಂದ ಗೆಲ್ಲಲಿದೆ ; ಮುಂದಿನ ಮೂರು ವರ್ಷಗಳ ಕಾಲ ಕರ್ನಾಟಕ ರಾಜ್ಯದಲ್ಲಿ ಎದುರಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಸುಳ್ಯದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್‍

ಸುಳ್ಯ, ಅ 13 : “ಉಪಚುನಾವಣೆಯಲ್ಲಿ ಎಲ್ಲಾ 15 ಸ್ಥಾನಗಳನ್ನು ಬಿಜೆಪಿ ಭಾರಿ ಅಂತರದಿಂದ ಗೆಲ್ಲಲಿದೆ. ಆದ್ದರಿಂದ ಮುಂದಿನ ಮೂರು ವರ್ಷಗಳ ಕಾಲ ಕರ್ನಾಟಕ ರಾಜ್ಯದಲ್ಲಿ ಎದುರಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಸುಳ್ಯಕ್ಕೆ ಆಗಮಿಸಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಸಾಮಾನ್ಯ ಕಾರ್ಯಕರ್ತನಿಗೂ ರಾಜ್ಯಾಧ್ಯಕ್ಷನಾಗುವ ಅರ್ಹತೆ, ಅವಕಾಶ ಬಿಜೆಪಿಯಲ್ಲಿ ಮಾತ್ರ ಲಭ್ಯವಿದೆ. ನಮ್ಮ ಪಕ್ಷದಲ್ಲಿ ಪ್ರತಿಯೊಬ್ಬ ಪಕ್ಷದ ಕಾರ್ಯಕರ್ತರು ಪಕ್ಷದ ಅಧ್ಯಕ್ಷರಾಗಲು ಅರ್ಹರಾಗಿದ್ದಾರೆ. ನಾನು ಈ ಸ್ಥಾನದಲ್ಲಿ ಕೇವಲ ನಿಮಿತ್ತ ಮಾತ್ರ. ರಾಜ್ಯಾಧ್ಯಕ್ಷ ಹುದ್ದೆ ಒಂದು ಸ್ಥಾನವಲ್ಲ ಅದು ಜವಾಬ್ದಾರಿಯಾಗಿದೆ. ಆದ್ದರಿಂದ ನೀವು ನನಗೆ ನೀಡಿದ ಸನ್ಮಾನವು ನಿಮಗೆ ಸಂದದ್ದು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆದ್ದು ಸರಕಾರ ರಚಿಸಲಿದೆ. ಆ ನಿಟ್ಟಿನಲ್ಲಿ ಎಲ್ಲರ ವಿಶ್ವಾಸ ಪಡೆದು ಪಕ್ಷವನ್ನು ಸಮರ್ಥವಾಗಿ ಸಂಘಟಿಸಿ ಮುನ್ನಡೆಸಲಾಗುವುದು ಎಂದವರು ತಿಳಿಸಿದರು.

ಈ ಸಂದರ್ಭ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್‌ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಭೋದ್‌ ಶೆಟ್ಟಿ ಮೇನಾಲ, ಜಿಲ್ಲಾ ಮುಖಂಡ ಎ.ವಿ. ತೀರ್ಥರಾಮ ಉಪಸ್ಥಿತರಿದ್ದರು.