Monday, January 20, 2025
ಸುದ್ದಿ

ಸೋಮವಾರ ನಡೆಯಲಿದೆ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅಂತ್ಯಸಂಸ್ಕಾರ – ಕಹಳೆ ನ್ಯೂಸ್‍

ಮಂಗಳೂರು, ಅ 13 : ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ನಿಧನ ಹೊಂದಿದ ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸೋಮವಾರ ಹುಟ್ಟೂರು ಬಂಟ್ವಾಳ ತಾಲೂಕಿನಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕದ್ರಿಯವರ ಪುತ್ರ ಗುರುಪ್ರಸಾದ್ ಭಾನುವಾರದಂದು ಕುವೈಟ್ ನಿಂದ ಮಂಗಳೂರಿಗೆ ಆಗಮಿಸಲಿದ್ದಾರೆ. ಸೋಮವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕದ್ರಿ ಗೋಪಾಲನಾಥ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಮಂಗಳೂರಿನಪುರಭವನದಲ್ಲಿ ಇರಿಸಲಾಗುವುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಧ್ಯಾಹ್ನದ ಬಳಿಕ ಮೃತದೇಹವನ್ನು ಅವರ ಹುಟ್ಟೂರಾದ ಬಂಟ್ವಾಳ ಸಮೀಪದ ಸಜೀಪಕ್ಕೆ ಕೊಂಡೊಯ್ದು ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.