ಬಂಟ್ವಾಳ: ಜಗತ್ತ್ ಪ್ರಸಿದ್ಧ, ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಡಾ| ಕದ್ರಿ ಗೋಪಾಲನಾಥ್ ಅವರಿಗೆ ಶ್ರದ್ಧಾಂಜಲಿ ಸಭೆ ಬುಧವಾರ ಸಂಜೆ 4:00 ಗಂಟೆಗೆ ಸಜೀಪ ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸುಭಾಷ್ ನಗರ, ಇಲ್ಲಿ ನಡೆಯಲಿದೆ ಎಂದು ಮಾಜಿ ಅಧ್ಯಕ್ಷರು ದ.ಕ ಜಿಲ್ಲಾ ಪಂಚಾಯತ್ ಬಿ.ಸದಾನಂದ ಪೂಂಜಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭಿಮಾನಿಗಳು, ನಾಗರೀಕರು ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಶೃದ್ದಾಂಜಲಿ ಸಭೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ ಮಾಡಿದ್ದಾರೆ. ಡಾಕ್ಟರೇಟ್ ಕದ್ರಿ ಗೋಪಾಲನಾಥ್ ರವರು 1950ರ ವರ್ಷದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ, ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಮಿತ್ತಕೆರೆ ಎಂಬಲ್ಲಿ ಜನಿಸಿದರು. ಕರಾವಳಿಯ ಹೆಸರನ್ನು ಜಗತ್ತಿಗೆ ಪರಿಚಯಿಸಿದ ಸಜೀಪದ ಅಮೂಲ್ಯ ಸೊತ್ತು.
ಹಾಗಾಗಿ ಹುಟ್ಟೂರಿನಲ್ಲಿ ನಾಳೆ ಅವರ ಶೃದ್ದಾಂಜಲಿ ಸಭೆ ನಡೆಯಲಿದ್ದು ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಜಿ.ಪಂ.ಸದಸ್ಯರು, ತಾಲೂಕು ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.