Sunday, November 24, 2024
ಸುದ್ದಿ

ಫಿಲೋಮಿನಾದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿ ಸಭೆ- ಕಹಳೆ ನ್ಯೂಸ್

ಪುತ್ತೂರು: ಶಿಕ್ಷಣ ಸಂಸ್ಥೆಯು ಹಮ್ಮಿಕೊಳ್ಳುವ ಅಭಿವೃದ್ಧಿ ಯೋಜನೆಗಳಿಗೆ ಹಿರಿಯ ವಿದ್ಯಾರ್ಥಿಗಳು ಧನಾತ್ಮಕವಾಗಿ ಸ್ಪಂದಿಸುವ ಮನೋಗುಣ ಹೊಂದಿದಾಗ ಸಂಸ್ಥೆಯು ಇನ್ನೂ ಎತ್ತರಕ್ಕೆ ಬೆಳೆಯಲು ಸಾಧ್ಯ ಎಂದು ಎಂದು ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎ ಜಗಜೀವನ್ ದಾಸ್ ರೈ ಹೇಳಿದರು.

ಕಾಲೇಜಿನ ಹಿರಿಯ ವಿದಾರ್ಥಿ ಸಂಘದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಈ ಸಂಸ್ಥೆಯಲ್ಲಿ ಅಧ್ಯಯನವನ್ನು ನಡೆಸಿದ ಅದೆಷ್ಟೋ ಸಾವಿರ ವಿದ್ಯಾರ್ಥಿಗಳು ಸಮಾಜದ ವಿವಿಧ ರಂಗಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಂಸ್ಥೆಯು ನಿರ್ದಿಷ್ಟ ಯೋಜನೆಯನ್ನು ಹಮ್ಮಿಕೊಂಡಾಗ ಹಿರಿಯ ವಿದ್ಯಾರ್ಥಿಗಳು ತಮ್ಮ ಸಾಮಥ್ರ್ಯಕ್ಕನುಗುಣವಾಗಿ ಸಹಕಾರ ನೀಡಲು ಸದಾ ಸಿದ್ದ. ಶಿಕ್ಷಣ ಸಂಸ್ಥೆಯ ಬೆಳವಣಿಗೆಯು ಸಮಾಜದ ಅಬಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪದವಿ ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಮಾತನಾಡಿ, ಶಿಕ್ಷಣ ಸಂಸ್ಥೆಯ ಬೆಳವಣಿಗೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಪಾತ್ರ ಮಹತ್ತರವಾದುದು. ಹಿರಿಯ ವಿದ್ಯಾರ್ಥಿಗಳು ಸಂಸ್ಥೆಯೊಂದಿಗೆ ನಿಕಟ ಬಾಂಧವ್ಯವನ್ನು ಸದಾ ಹೊಂದಿರಬೇಕು. ಈ ಸಂಸ್ಥೆಯು ವರ್ಷಂಪ್ರತಿ ಹಲವಾರು ರೀತಿಯ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಆಯೋಜಿಸುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂತಹ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘವು ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತಿರುವುದು ಹೆಮ್ಮೆಯ ಸಂಗತಿ. ಈ ಸಂಘದ ಪೂರ್ವಾಧ್ಯಕ್ಷರು ನೀಡಿದ ಅತ್ಯದ್ಭುತ ಸಹಕಾರವನ್ನು ಸ್ಮರಿಸುತ್ತೇನೆ ಎಂದರು.

ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಂ. ವಿಜಯ್ ಲೋಬೊ ಮಾತನಾಡಿ, ಈ ಶೈಕ್ಷಣಿಕ ವರ್ಷದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಜ್ಞಾನಾರ್ಜನೆಯೊಂದಿಗೆ ವಿವಿಧ ಪಠ್ಯೇತರ ಚಟುವಟಿಕೆಗಳಾದ ಯೋಗ, ಕ್ರೀಡೆ ಮುಂತಾದವುಗಳಲ್ಲಿ ಭಾಗವಹಿಸಿ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಈ ಸಂಸ್ಥೆಯು ನಾನಾ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿದೆ. ಹಿರಿಯ ವಿದ್ಯಾರ್ಥಿಗಳು ಸಂಸ್ಥೆಯ ಏಳಿಗೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು  ಇನ್ನೂ ಹೆಚ್ಚಿನ ಪ್ರಗತಿಗೆ ಸಹಕರಿಸಬೇಕು ಎಂದರು.
ಹಿರಿಯ ವಿದ್ಯಾರ್ಥಿ ಪ್ರಶಾಂತ್ ರೈ ಪ್ರಾರ್ಥಿಸಿದರು. ಸಂಘದ ಕಾರ್ಯದರ್ಶಿ ಡಾ. ಕೆ ಚಂದ್ರಶೇಖರ್ ಹಿಂದಿನ ಸಭೆಯ ವರದಿ ಮಂಡಿಸಿದರು. ನಿಕಟ ಪೂರ್ವ ಅಧ್ಯಕ್ಷ ಜಯರಾಜ್ ಭಂಡಾರಿ ವಂದನಾರ್ಪಣೆಗೈದರು.