Sunday, November 24, 2024
ಸುದ್ದಿ

ಮಂಗಳೂರಲ್ಲಿ ಆರೆಂಜ್ ಅಲರ್ಟ್ –ಕಹಳೆ ನ್ಯೂಸ್

ಮಂಗಳೂರು: ಅರಬ್ಬೀ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ದ.ಕ.ಜಿಲ್ಲೆ ಸೇರಿದಂತೆ ಮಂಗಳೂರು ನಗರದಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ಉತ್ತಮ ಮಳೆಯಾಗಿದ್ದು, ಮಧ್ಯಾಹ್ನ ಸುರಿದ ಭಾರೀ ಮಳೆಯಿಂದಾಗಿ ನಗರದಲ್ಲಿ ಕೆಲವು ತಗ್ಗು ಪ್ರದೇಶಗಳು ಜಲವೃತ್ತಗೊಂಡಿದೆ. ನಗರದ ಸೆಂಟ್ರಲ್ ರೈಲ್ವೇ ನಿಲ್ದಾಣದ ಆವರಣದಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ, ಆವರಣ ತುಂಬ ಕೃತಕ ನೆರೆ ಆವರಿಸಿ ಪ್ರಯಾಣಿಕರಿಗೆ, ವಾಹನ ಸವಾರರಿಗೆ ತೊಂದರೆ ಉಂಟಾಯಿತು.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಅ.18 ಮತ್ತು ಅ.19 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಈ ವೇಳೆ 64.5 ಮಿ.ಮೀನಿಂದ 115.5 ಮಿ.ಮೀ ವರೆಗೆ ಮಳೆ ಬೀಳುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು