ಬೆಂಗಳೂರು: ರ್ಯಾಂಪ್ ವಾಕ್ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ನಗರದ ಪೀಣ್ಯ ಏಮ್ಸ್ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ ಎನ್ನಲಾಗಿದೆ.
ಶಾಲಿನಿ(21) ಮೃತ ವಿದ್ಯಾರ್ಥಿನಿಯಾಗಿದ್ದು,ಏಮ್ಸ್ ಕಾಲೇಜ್ನಲ್ಲಿ ಎಂಬಿಎ ಓದುತ್ತಿದ್ದ ಶಾಲಿನಿ, ಕಾಲೇಜಿನಲ್ಲಿ ನಡೆಯಬೇಕಿದ್ದ ಫ್ರೆಶರ್ಸ್ ಡೇಗಾಗಿ ರ್ಯಾಂಪ್ ವಾಕ್ ಅಭ್ಯಾಸ ನಡೆಸುತ್ತಿದ್ದ ವೇಳೆಯಲ್ಲಿ ಕುಸಿದು ಬಿದಿದ್ದಾರೆ ಎನ್ನಲಾಗಿದೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಯಿತು. ತಪಾಸಣೆ ನಡೆಸಿದ ವೈದ್ಯರು ಶಾಲಿನಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಾಲಿನಿ ಮೃತದೇಹವನ್ನು ಮರಣೋತ್ತರ ಪರಿಕ್ಷೆಗಾಗಿ ಸಪ್ತಗಿರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.