ನಾಳೆ ಕಡಬದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 165ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಪೂಜೆ, ಭಜನೆ,ಧಾರ್ಮಿಕ ಸಭೆ,ಸಾಧಕರಿಗೆ ಸನ್ಮಾನ-ಕಹಳೆ ನ್ಯೂಸ್
ಕಡಬ: ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಯುವವಾಹಿನಿ ಕಡಬ ಘಟಕ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಕಡಬ, ಮರ್ದಾಳ,ಆಲಂಕಾರು ವಲಯಗಳ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 165ನೇ ಜನ್ಮ ದಿನಾಚರಣೆ ಪ್ರಯುಕ್ತ ಗುರುಪೂಜೆ, ಭಜನೆ, ಧಾರ್ಮಿಕ ಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಾಳೆ ಬೆಳಿಗ್ಗೆ ಕಡಬ ಶ್ರೀ ದುಗಾರ್ಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ 8ರಿಂದ ಹರೀಶ್ ಶಾಂತಿ ಪುತ್ತೂರು ಇವರ ನೇತೃತ್ವದಲ್ಲಿ ಪ್ರಾರ್ಥನೆ, ಗುರುಪೂಜೆ ಪ್ರಾರಂಭಗೊಳ್ಳಲಿದೆ. ನಂತರ ಆಲಂಕಾರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ವತಿಯಿಂದ ಭಜನೆ, ಮಹಾಪೂಜೆ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಕಡಬ ಮೇಲಿನ ಪೇಟೆಯ ಬಸ್‍ನಿಲ್ದಾಣದಿಂದ ಧರ್ಮಸ್ಥಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಮಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ತನಕ ಚೆಂಡೆಮೇಳದೊಂದಿಗೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ಕರೆತರಲಾಗುವುದು. ನಂತರ ನಡೆಯುವ ಧಾರ್ಮಿಕ ಸಭೆಯಲ್ಲಿ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ.
ಕಡಬ ಯುವವಾಹಿನಿ ಘಟಕದ ಅಧ್ಯಕ್ಷ ಬಿ.ಎಲ್.ಜನಾರ್ದನರವರ ಅಧ್ಯಕ್ಷತೆಯಲ್ಲಿ ನಡೆಯುವ ಧಾರ್ಮಿಕ ಸಭೆಯನ್ನು ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಅಧ್ಯಕ್ಷ ನರೇಶ್‍ಕುಮಾರ್ ಸಸಿಹಿತ್ಲು ಉದ್ಘಾಟಿಸಲಿದ್ದು, ಮಂಗಳೂರು ಸಂತ ಅಲೋಶೀಯಸ್ ಕಾಲೇಜಿನ ಉಪನ್ಯಾಸಕ ಡಾ.ಗಣೇಶ್ ಅಮೀನ್ ಸಂಕಮಾರ್‍ರವರು ಗುರುಸಂದೇಶ ನೀಡಲಿದ್ದಾರೆ.
ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ತಾಲೂಕು ಅಧ್ಯಕ್ಷ ಜಯಂತ ನಡುಬೈಲುರವರು ವಿದ್ಯಾನಿಧಿ ಹಸ್ತಾಂತರ ಮಾಡಲಿದ್ದಾರೆ. ಮೈಸೂರು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸುರೇಶ್ ಕುಮಾರ್‍ರವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಧಾರ್ಮಿಕ ಹಾಗೂ ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕೆ.ಚಂದ್ರಶೇಖರ ಆಲಂಕಾರು ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಂಗಳೂರು ವಿವಿ ಪದವಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸುಕೇತ ಪಿ. ಯವರಿಗೆ ಸನ್ಮಾನ ನಡೆದು ಬಳಿಕ ಸಾಂಸ್ಕøತಿಕ ಕಾರ್ಯಕ್ರಮ, ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.