Tuesday, January 21, 2025
ಸುದ್ದಿ

ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಆಡಲಿರುವ ಸರಸ್ವತೀ ಪದವಿಪೂರ್ವ ವಿದ್ಯಾಲಯದ ತಂಡ-ಕಹಳೆ ನ್ಯೂಸ್

ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಗುಡ್ಡಗಾಡು ಬಾಲಕರ ವಿಭಾಗದ ಓಟದಲ್ಲಿ ಸರಸ್ವತೀ ಪದವಿಪೂರ್ವ ವಿದ್ಯಾಲಯದ ತಂಡವು ಗೆಲುವು ಸಾಧಿಸಿದ್ದಾರೆ.

ನಂತರ ಬೆಳಗಾವಿಯಲ್ಲಿ ನಡೆದ ವಿದ್ಯಾಭಾರತಿ ಪ್ರಾಂತ ಮತ್ತು ಕ್ಷೇತ್ರಿಯ ಮಟ್ಟದಲ್ಲಿ ಗೆದ್ದು ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ. ರಾಜಸ್ಥಾನದ ನಾಗೂರಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಈ ತಂಡದ ಗುರು ಪ್ರಸಾದ್, ವಿಜಯ್‍ಕುಮಾರ್, ರಶಿತ್, ಸುಜಿತ್ ಎಂ, ಮನೀಶ್, ತೇಜಪ್ರಕಾಶ್ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಲಿದ್ದು, ಈ ತಂಡಕ್ಕೆ ದೈಹಿಕ ಶಿಕ್ಷಕ ಲಕ್ಷ್ಮೀಶ ಗೌಡ ಮಾರ್ಗದರ್ಶನ ನೀಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು