ಬೆಂಗಳೂರು: ಗಿರಿ ನಗರದ ರಾಮಶ್ರಮದಲ್ಲಿ ಸಪರಿವಾರ ಸೀತಾರಾಮ ಚಂದ್ರ ದೇವರ ಪ್ರತಿಷ್ಠಾಪನಾ ವಾರ್ಷಿಕೋತ್ಸವ ನಡೆಯಲಿದೆ. ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಸಾನ್ನಿಧ್ಯ ವಹಿಸುವರು. ಇನ್ನೂ ವಾರ್ಷಿಕೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಗುರುದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಪುಣ್ಯಾಹ, ದೇವನಾಂದಿ, ಸಂಕಲ್ಪ, ಋತ್ವಿಗ್ವರಣ, ಕೌತುಕ ಬಂಧನ, ಧ್ವಜಾರೋಹಣ, ಬಲಿ ಸೇವೆಗಳು ನಡೆಯಲಿದೆ. ಅಂದು ಸಂಜೆ ರಾಕ್ಷೋಘ್ನ ಹೋಮ, ವಾಸ್ತುಪೂಜೆ, ಕಲಶಸ್ಥಾಪನೆ, ಕುಂಡಮಂಟಪ ಸಂಸ್ಕಾರ, ಅಗ್ನಿಜನನ, ಅಧಿವಾಸ ಹೋಮ, ಭೇರಿತಾಡನ, ರಂಗಪೂಜೆ, ಉತ್ಸವಾಂಗ ಬಲಿ, ನಗರ ಪ್ರದಕ್ಷಿಣೆ ನಡೆಯಲಿದೆ ಎಂದು ಅಧ್ಯಕ್ಷ ರಮೇಶ್ ಹೆಗಡೆ ಕೋರಮಂಗಲ ಮತ್ತು ಕಾರ್ಯದರ್ಶಿ ಸುಬ್ರಹ್ಮಣ್ಯ ಹೆಗಡೆ ಕಣ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಂತರ ತತ್ವಕಲಾ ವೃದ್ಧಿಹೋಮ, ರಾಮತಾರಕ ಹವನ, ಕಲಶಾಭಿಷೇಕ, ಧ್ವಜಾವರೋಹಣ ಮತ್ತಿತರ ವಿಧಿವಿಧಾನಗಳು ನಡೆಯಲಿವೆ. ಶ್ರೀರಾಮದೇವರಿಗೆ ನಿರ್ಮಿಸಲು ಉದ್ದೇಶಿಸಿರುವ ರಜತ ಪ್ರಭಾವಳಿಗೆ ಸಮರ್ಪಣೆಗೆ ಈ ಉತ್ಸವ ದಿನಗಳಂದು ಅವಕಾಶ ಇರುತ್ತದೆ ಎಂದು ವಿವರಿಸಿದ್ದಾರೆ.
You Might Also Like
ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಿದ ಶಾಸಕ ವೇದವ್ಯಾಸ್ ಕಾಮತ್-ಕಹಳೆ ನ್ಯೂಸ್
ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ...
ಕತಾರಿನಲ್ಲಿ ಭಾರತೀಯರಿಂದ ಆಯುರ್ವೇದ ದಿನಾಚರಣೆ-ಕಹಳೆ ನ್ಯೂಸ್
ಭಾರತೀಯ ದೂತವಾಸದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರವು ಆಯುರ್ವೇದ ದಿನಾಚರಣೆಯನ್ನು ಆಚರಿಸಿತು. ಭಾರತೀಯ ದೂತವಾಸದ ಉಪಮುಖ್ಯಸ್ಥರಾದ ಶ್ರೀ ಸಂದೀಪ್ ಕುಮಾರ್ ಈ ಕಾರ್ಯಕ್ರಮದ. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು....
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಫುಡ್ ಫೆಸ್ಟ್-ಕಹಳೆ ನ್ಯೂಸ್
ಪುತ್ತೂರು; ದೂರದೃಷ್ಟಿ, ಕಠಿಣ ಪರಿಶ್ರಮಗಳೇ ಯಶಸ್ಸಿನ ಮೆಟ್ಟಿಲು. ಅವಕಾಶಗಳು ಸಿಕ್ಕಾಗಲೆಲ್ಲಾ ನಿಮ್ಮ ಗುರಿಯನ್ನು ತಲುಪಲು ಅವುಗಳನ್ನು ಬಳಸಿಕೊಳ್ಳಿ’ ಎಂದು ಮಂಗಳೂರಿನ ವಾಣಿಜ್ಯೋದ್ಯಮಿ ಶ್ರೀ ವಿಜಿತ್ ಶೆಟ್ಟಿ ಅವರು...
ಸುಬ್ರಹ್ಮಣ್ಯದ ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲ್ ವಿಕ್ರಂ ಗೌಡ ಮತ್ತು ತಂಡ-ಕಹಳೆ ನ್ಯೂಸ್
ಉಡುಪಿ: ಕಾಡಿನಲ್ಲಿಯೇ ಸುತ್ತಾಡುವ ನಕ್ಸಲರು ಕೆಲವು ಸಮಯದ ಹಿಂದೆ ರೈಲಿನ ಮೂಲಕ ಪ್ರಯಾಣಿಸಿದ್ದರು ಎಂಬ ಮಾಹಿತಿ ಈಗ ಹೊರಗೆ ಬಿದ್ದಿದೆ. ಎನ್ಕೌಂಟರ್ಗೆ ಬಲಿಯಾದ ನಕ್ಸಲ್ ವಿಕ್ರಂ ಗೌಡ ಮತ್ತು ತಂಡ ಸುಬ್ರಹ್ಮಣ್ಯದಿಂದ ಮುರ್ಡೇಶ್ವರ ವರೆಗೆ ರೈಲಿನಲ್ಲಿ ಹೋಗಿ ಅನಂತರ ಕಾಡು ಹಾದಿ ಹಿಡಿದಿದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಲೋಕಸಭೆ ಚುನಾವಣೆ ಸನಿಹದಲ್ಲಿ ಎಲ್ಲೆಡೆ ಹೆಚ್ಚುವರಿ ಭದ್ರತೆ ಇದ್ದುದರಿಂದ ದಕ್ಷಿಣ ಕನ್ನಡ, ಕೊಡಗು ಗಡಿಭಾಗ ಕೂಜುಮಲೆ, ಕಡಮಕಲ್ಲು , ಸುಬ್ರಹ್ಮಣ್ಯ, ಬಿಳಿನೆಲೆ ಭಾಗದಲ್ಲಿ ಹೆಚ್ಚಿನ ದಿನಗಳನ್ನು ನಕ್ಸಲರು ಕಳೆದಿದ್ದರು. ಈ ವೇಳೆ ಇಲ್ಲಿನ ಅರಣ್ಯದಂಚಿನ ಮನೆಗಳಿಗೆ ಭೇಟಿ ನೀಡಿ ದಿನಸಿ ಹಾಗೂ ಇನ್ನಿತರ ಸಾಮಗ್ರಿಗಳನ್ನು ಕೊಂಡೊಯ್ದಿದ್ದರು. ಅಲ್ಲಿಂದ ಪಕ್ಕದ ಸುಬ್ರಹ್ಮಣ್ಯ ಕ್ರಾಸಿಂಗ್ ರೋಡ್(ನೆಟ್ಟಣ) ರೈಲು ನಿಲ್ದಾಣಕ್ಕೆ ಆಗಮಿಸಿ ರೈಲಿನ ಮೂಲಕ ಮುರ್ಡೇಶ್ವರ ಕಡೆಗೆ ಪ್ರಯಾಣಿಸಿದ್ದರು. ಮುರ್ಡೇಶ್ವರ ರೈಲು ನಿಲ್ದಾಣದಲ್ಲಿ ಇಳಿದು ಕಾಡು ಹತ್ತಿದ್ದ ಅವರು ಕೊಲ್ಲೂರು...