Wednesday, January 22, 2025
ಸುದ್ದಿ

ವೇದವ್ಯಾಸ ಧ್ಯಾನಮಂದಿರದಲ್ಲಿ ಶಾರದಾ ಪೂಜೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಶಾರದಾ ಪೂಜೆ, ಭಜನೆ ಮತ್ತು ಹುಟ್ಟುಹಬ್ಬ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ನಿವೃತ್ತ ಷಣ್ಮುಖ ದೇವ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ವಿದ್ಯಾಭಾರತಿಯ ಜಿಲ್ಲಾ ಕಾರ್ಯದರ್ಶಿಯಾಗಿರವ ಲೋಕಯ್ಯರವರು ಮಾತನಾಡಿ ನೀವು ಮಾಡುವಂತಹ ನಿತ್ಯ ಸರಸ್ವತಿ ವಂದನೆ ಪುಣ್ಯ ಕ್ಷೇತ್ರದಲ್ಲಿ ತೀರ್ಥಸ್ನಾನ ಮಾಡಿದಂತಾಗುತ್ತದೆ. ಭಾರತೀಯದಲ್ಲಿನ ಇಂತಹ ಸಂಗತಿಗಳು ಎಲ್ಲಾ ಕಡೆ ಕಾಣಲು ಸಿಗುವುದಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಲ್ಲಿ ಭಾರತೀಯತೆ ಕಾಣಸಿಗುತ್ತದೆ. ಕಳ್ಳನಾಗಲು ಬೇಡ, ಸುಳ್ಳ ಹೇಳಲು ಬೇಡ, ಒಳ್ಳೆಯ ಗುಣಬಿಡಬೇಡ ಅಂತೆಯೇ ನಾವು ಒಳ್ಳೆಯದನ್ನು ಯೋಚನೆ ಮಾಡಬೇಕು, ಅದು ನಮಗೆ ಧೈರ್ಯಕೊಡುತ್ತದೆ. ಒಳ್ಳೆಯ ಶಿಕ್ಷಣದಿಂದ ಮನೆ, ಸಮಾಜ ಬದಲಾಗುತ್ತದೆ. ಹಾಗೂ ಈ ಸಂಸ್ಥೆಯಿಂದ ಇನ್ನೂ ಹೆಚ್ಚು ಹೆಚ್ಚಿನ ಕಾರ್ಯಕ್ರಮಗಳು ನಡೆಯಲಿ ಎಂದು ಶುಭಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಮೊದಲಿಗೆ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ನಂತರ ವೇದಿಕೆಗೆ ಆಗಮಿಸಿದ ಅತಿಥಿಗಳಿಗೆ ಹೂಗುಚ್ಛ ನೀಡಿ ಸಾಂಕೇತಿಕವಾಗಿ ಸ್ವಾಗತಿಸಲಾಯಿತು. ಹುಟ್ಟುಹಬ್ಬ ಆಚರಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಅಧ್ಯಾಪಕ ವೃಂದದವರು ಆರತಿ ಅಕ್ಷತೆ ಹಾಗೂ ತಿಲಕಧಾರಣೆ ಮಾಡಿ ಸಿಹಿ ಹಂಚಿದರು. ಇನ್ನೂ ವಿದ್ಯಾರ್ಥಿಗಳು ಭಾರತಮಾತೆಗೆ ಪುಷ್ಪಾರ್ಚನೆ ಮಾಡಿ ನಿಧಿಸಮರ್ಪಣೆ ಮಾಡಿದರು.

ನಂತರ ವಿದ್ಯಾಭಾರತಿ ಜ್ಞಾನ ವಿಜ್ಞಾನ ಮೇಳ ಸ್ಪರ್ಧೆಯಲ್ಲಿ ಜಿಲ್ಲೆ, ಪ್ರಾಂತ ಹಾಗೂ ಕ್ಷೇತ್ರಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.


ವೇದಿಕೆಯಲ್ಲಿ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್ ಸಾಲ್ಯಾನ್, ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಸದಸ್ಯರಾದ ಮಲ್ಲಿಕಾಶೆಟ್ಟಿ, ಪ್ರಗತಿಪರ ಕೃಷಿಕರಾದ ಹಾಗೂ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಗಿಲ್ಕಿಂಜ ಕೃಷ್ಣ ಭಟ್ ಹಾಗೂ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮಾತಾಜಿಗಳಾದ ದಿವ್ಯಾ ಕೆ ಸ್ವಾಗತಿಸಿ, ವಿದ್ಯಾ ನಿರೂಪಿಸಿದರು.