ಶ್ರೀನಗರ: ಭಾರತೀಯ ಸೇನೆಯು ಭಾನುವಾರ ಪಾಕ್ ಆಕ್ರಮಿತ ಕಾಶ್ಮೀರದ ನೀಲಂ ಕಣಿವೆಯಲ್ಲಿ ಸಕ್ರಿಯವಾಗಿದ್ದ ನಾಲ್ಕು ಉಗ್ರಗಾಮಿ ಶಿಬಿರಗಳ ಮೇಲೆ ವ್ಯಾಪಕ ಫಿರಂಗಿ ದಾಳಿ ನಡೆಸಿದೆ. ದಾಳಿಯಲ್ಲಿ ಪಾಕ್ ಸೇನೆಯ ಐವರು ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ.
ಭಾರತದೊಳಗೆ ನುಸುಳಲು ಗಡಿ ನಿಯಂತ್ರಣ ರೇಖೆಯಲ್ಲಿ ಸನ್ನದ್ಧರಾಗಿದ್ದ ಭಯೋತ್ಪಾದರಿಗೆ ರಕ್ಷಣೆ ನೀಡಲೆಂದು ಪಾಕ್ ಸೇನೆಯು ಭಾನುವಾರ ಮುಂಜಾನೆ ಭಾರತೀಯ ಸೇನೆಯ ಮುಂಚೂಣಿ ನೆಲೆಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿ (ಕವರಿಂಗ್ ಫೈರ್) ಆರಂಭಿಸಿತು.
ಗಡಿನಿಯಂತ್ರಣ ರೇಖೆಯ ತಂಗ್ಧರ್ ವಲಯದಲ್ಲಿ ಪಾಕ್ ಸೇನೆಯ ದಾಳಿಗೆ ಭಾರತೀಯ ಸೇನೆಯ ಇಬ್ಬರು ಯೋಧರು ಮತ್ತು ಓರ್ವ ನಾಗರಿಕ ಹುತಾತ್ಮರಾದರು.