ಗುವಾಹಟಿ: ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.
ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ.
2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.