Recent Posts

Tuesday, January 21, 2025
ಸುದ್ದಿ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರ-ಕಹಳೆ ನ್ಯೂಸ್

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಿ. ಕೆ. ಮಂಜುನಾಥ್, ಆಧುನಿಕ ಕಾಲಘಟ್ಟದಲ್ಲಿ ಮನುಷ್ಯನಲ್ಲಿ ಮಾನವೀಯ ಮೌಲ್ಯಗಳು ಮರೆಯಾಗುತ್ತಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳಸಿಕೊಳ್ಳಬೇಕು. ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಅದರ ಜೊತೆಗೆ ಎಲ್ಲರನ್ನೂ ಜೊತೆಗೂಡಿಸಿಕೊಂಡು ಹೋಗುವಂತಹ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯ ಡಾ. ಎ. ಪಿ. ಜೆ. ಅಬ್ದುಲ್ ಕಲಾಂರಂತಹ ವ್ಯಕ್ತಿಗಳು ವಿದ್ಯಾರ್ಥಿಗಳಿಗೆ ಪ್ರೇರಣೆ ಆಗಬೇಕು ಎಂದು ಹೇಳಿದರು.
ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ, ಕಾನೂನು ಕಾಲೇಜಿನ ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ ರವೀಂದ್ರ ಮಾತನಾಡಿ, ನಾವೆಲ್ಲರೂ ಹಸನ್ಮುಖಿಗಳಾಗಿರಬೇಕು. ಇಂದು ನಾವು ನಗುವುದನ್ನು ಮರೆಯುತ್ತಿದ್ದೇವೆ. ನಮ್ಮನ್ನು ನಗಿಸಲು ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಬೇಕಾದ ಅನಿವಾರ್ಯತೆ ಬಂದಿದೆ. ಹಾಗೆಯೇ ಅಸಾಧ್ಯ ಎಂಬುದು ಯಾವುದು ಇಲ್ಲ. ಮನುಷ್ಯ ಮನಸ್ಸು ಮಾಡಿದರೆ ಎಂತಹದನ್ನು ಸಾಧಿಸಬಹುದು ಎಂದು ಹೇಳಿದರು.
ಕಾರ್ಯಾಗಾರದ ಎರಡನೇ ಅವಧಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಂಯೋಜಕರಾದ ಶ್ರೀ ರಾಕೇಶ್ ಕಮ್ಮಾಜೆ ಕಾರ್ಯಕ್ರಮ ನಿರ್ವಹಣೆಯ ಕುರಿತು ಮಾತನಾಡಿ, ಒಂದು ಕಾರ್ಯಕ್ರಮದಲ್ಲಿ ಪ್ರತಿಯೊಂದು ಹಂತವು ಬಹುಮುಖ್ಯವಾದದ್ದು. ಆದ್ದರಿಂದ ಕಾರ್ಯಕ್ರಮದ ನಿರ್ವಹಣೆಯಲ್ಲಿ ಎಚ್ಚರವಾಗಿರಬೇಕು ಎಂದು ಹೇಳಿ, ಆಮಂತ್ರಣ ಪತ್ರಿಕೆ ತಯಾರು ಮಾಡುವುದು, ಅತಿಥಿಗಳನ್ನು ಸ್ವಾಗತಿಸುವಾಗ ಮಾಡಬೇಕಾದ ಕೆಲಸಗಳನ್ನು ಹಲವಾರು ಉದಾಹರಣೆಗಳ ಮೂಲಕ ವಿವರಿಸಿದರು.
ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ. ಪಿ., ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾದ ಅನಿಲ್ ಕುಮಾರ್ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾನೂನು ಉಪನ್ಯಾಸಕಿ ಮತ್ತು ಕಾರ್ಯಕ್ರಮದ ಸಂಯೋಜಕರಾದ ಕುಮಾರಿ ಶ್ರೀರಕ್ಷಾ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುದರ್ಶನ್ ವಂದಿಸಿದರು. ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಅಂಕಿತಾ ಕೆ. ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು