Friday, January 24, 2025
ರಾಜಕೀಯ

‘ಟಿಪ್ಪು ಜಯಂತಿ’ಯನ್ನು ನಾವೇ ಮುಂದೆ ನಿಂತು ಆಚರಿಸುತ್ತೇವೆ ಎಂದ ಬಿಜೆಪಿ ನಾಯಕ-ಕಹಳೆ ನ್ಯೂಸ್

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ, ಟಿಪ್ಪು ಜಯಂತಿಯನ್ನು ರದ್ದುಪಡಿಸಲು ಮುಂದಾಗಿರುವ ಮಧ್ಯೆ ಅದೇ ಪಕ್ಷದ ನಾಯಕರೊಬ್ಬರು ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಆಚರಿಸುತ್ತೇವೆ ಎಂದು ಹೇಳುವ ಮೂಲಕ ಸರ್ಕಾರವನ್ನು ಮುಜುಗರಕ್ಕೆ ಸಿಲುಕಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ಆಕಾಂಕ್ಷಿ ಶರತ್ ಬಚ್ಚೇಗೌಡ ಹೊಸಕೋಟೆಯಲ್ಲಿ ನಡೆದ ಉರುಸ್ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದು, ಈ ಸಂದರ್ಭದಲ್ಲಿ ಅಲ್ಲಿದ್ದ ವ್ಯಕ್ತಿಯೊಬ್ಬರು ಶರತ್ ಬಚ್ಚೇಗೌಡ ಅವರ ಮೇಲೆ ನೋಟಿನ ಮಳೆಗರೆದು ಸಂಭ್ರಮಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಹೊಸಕೋಟೆ ಕ್ಷೇತ್ರದಲ್ಲಿ ತಮಗೆ ಬಿಜೆಪಿ ಟಿಕೆಟ್ ಸಿಗದಿದ್ದರೂ ತಾವು ಸ್ಪರ್ಧಿಸಿಯೇ ಸಿದ್ಧ ಎಂದು ಶರತ್ ಬಚ್ಚೇಗೌಡ ಈಗಾಗಲೇ ಹೇಳಿಕೆ ನೀಡಿದ್ದು, ಇದಕ್ಕೆ ಪೂರಕ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿಯೇ ಮುಖ್ಯಮಂತ್ರಿ ಯಡಿಯೂರಪ್ಪ ತಮಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಿದರೂ ಅಧಿಕಾರ ಸ್ವೀಕರಿಸದೆ ಬಿಜೆಪಿ ಟಿಕೆಟ್ ಗಾಗಿ ಶರತ್ ಬಚ್ಚೇಗೌಡ ಪಟ್ಟು ಹಿಡಿದಿದ್ದಾರೆ.