Saturday, January 25, 2025
ರಾಜಕೀಯ

ಇಂದಿನಿಂದ ಹೆಚ್ಡಿಕೆ ಉತ್ತರ ಕರ್ನಾಟಕ ಪ್ರವಾಸ ಆರಂಭ-ಕಹಳೆ ನ್ಯೂಸ್

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದಿನಿಂದ ಮೂರು ದಿನಗಳ ಕಾಲ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಇಂದು ಮಧ್ಯಾಹ್ನ ಬೆಂಗಳೂರಿನಿಂದ ಬೆಳಗಾವಿಗೆ ತೆರಳಿದ ಅವರು, ಸಂಜೆ ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹುಕ್ಕೇರಿ ಕ್ಷೇತ್ರದಲ್ಲಿ ಪ್ರವಾಹ ಹಾಗೂ ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಸಂಕಷ್ಟದಲ್ಲಿರುವ ಜನರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಇಂದು ರಾತ್ರಿ ಚಿಕ್ಕೋಡಿಯಲ್ಲೇ ವಾಸ್ತವ್ಯ ಹೂಡಲಿದ್ದು, ನಾಳೆ ಕಾಗವಾಡ ಕ್ಷೇತ್ರದಲ್ಲಿ ಪ್ರವಾಹದಿಂದ ಹಾನಿಗೀಡಾಗಿರುವ ಸ್ಥಳಗಳಿಗೆ ಭೇಟಿ ನೀಡಿ ಸರ್ಕಾರದಿಂದ ಒದಗಿಸಿರುವ ಪರಿಹಾರ ಹಾಗೂ ಜನರು ಎದುರಿಸುತ್ತಿರುವ ಸಂಕಷ್ಟಗಳನ್ನು ಖುದ್ದು ವೀಕ್ಷಣೆ ಮಾಡಲಿದ್ದಾರೆ. ನಂತರ ಅಥಣಿ ತಾಲೂಕಿನ ನೆರೆ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನಾಳೆ ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸೋಮವಾರ ಹಾವೇರಿ, ಹಿರೇಕೆರೂರು, ರಾಣೆಬೆನ್ನೂರು ಮೊದಲಾದ ಪ್ರದೇಶಗಳಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಉಂಟಾಗಿರುವ ಹಾನಿ, ಜನರು ಎದುರಿಸುತ್ತಿರುವ ಸಮಸ್ಯೆಗಳು, ಸರ್ಕಾರ ನೀಡುತ್ತಿರುವ ಪರಿಹಾರ ಮೊದಲಾದವುಗಳನ್ನು ಪರಿಶೀಲನೆ ಮಾಡಿ ಸಂಕಷ್ಟದಲ್ಲಿರುವ ಜನರ ಸಮಸ್ಯೆಗಳನ್ನು ಆಲಿಸುವ ಕಾರ್ಯಕ್ರಮವನ್ನು ಕುಮಾರಸ್ವಾಮಿ ಹಾಕಿಕೊಂಡಿದ್ದಾ

ಜಾಹೀರಾತು
ಜಾಹೀರಾತು
ಜಾಹೀರಾತು