Recent Posts

Sunday, January 19, 2025
ಸುದ್ದಿ

ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಯುವಕರ ತಂಡವನ್ನು ವಶಪಡಿಸಿಕೊಂಡ ಸಿಸಿಬಿ ಪೊಲೀಸರು-ಕಹಳೆ ನ್ಯೂಸ್

ಮಂಗಳೂರು ನಗರದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ, ಯುವಕರ ತಂಡವೊಂದನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಇಕಾನಾಮಿಕ್ ಮತ್ತು ನಾರ್ಕೋಟಿಕ್ ಠಾಣೆ ಪೊಲೀಸರು, ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳಾದ ಕೋಕೆನ್, ಎಂ.ಡಿ.ಎಂ.ಎ, ಎಲ್.ಎಸ್.ಡಿ, ಪಿಲ್ಸ್, ಚರಸ್‍ಗಳನ್ನು ಹೊರರಾಜ್ಯಗಳಿಂದ ಖರೀದಿಸಿ, ಮಂಗಳೂರಿನ ಸಾರ್ವಜನಿಕರಿಗೆ ಮಾರಾಟ ಮಾಡಿ ಅಕ್ರಮ ಹಣಗಳಿಸಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ದೊರೆತ, ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕಿಶನ್ ಹೆಗ್ಡೆ, ಹಬೀಲ್ ಅಹಮ್ಮದ್, ಅನಂತ ಕುಡ್ವ, ಗೋಪಿನಾಥ ಭಂಡಾರ್ಕರ್, ಎಂಬುವವರನ್ನು ಮಂಗಳೂರು ನಗರದ ಮೋರ್ಗನ್ ಗೇಟ್ ಬಳಿಯಿಂದ ವಶಕ್ಕೆ ಪಡೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರಿಂದ 22 ಗ್ರಾಂ ಕೋಕೆನ್, 6 ಗ್ರಾಂ ಎಂಡಿಎಂಎ, 75 ಫಿಲ್ಸ್, 5 ಎಲ್.ಎಸ್.ಡಿ, 10 ಗ್ರಾಂ ಚರಸ್ ಒಟ್ಟು 2,50,000 ಮೌಲ್ಯದ ನಿಷೇಧಿತ ಮಾದಕ ವಸ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಅಲ್ಲದೇ ಆರೋಪಿಯಿಂದ 3 ಮೊಬೈಲ್ ಫೋನ್ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ ರೂ. 3 ಲಕ್ಷ ಆಗಿದ್ದು, ಈ ಬಗ್ಗೆ ಇಕನಾಮಿಕ್ & ನಾರ್ಕೋಟಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾದಕ ವಸ್ತುವಿನ ಮಾರಾಟದ ಜಾಲದಲ್ಲಿ ಇನ್ನೂ ಇತರರು ಭಾಗಿಯಾಗಿದ್ದು, ಪ್ರಕರಣದಲ್ಲಿ ಹೆಚ್ಚಿನ ತನಿಖೆ ಮುಂದುವರಿದಿದೆ.
ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಡಾ. ಪಿ.ಎಸ್. ಹರ್ಷ, ಐ.ಪಿ.ಎಸ್, ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಗೂ ಇಕಾನಾಮಿಕ್ & ನಾರ್ಕೋಟಿಕ್ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.