Recent Posts

Sunday, January 19, 2025
ರಾಜಕೀಯ

Breaking News : ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಸಾಧ್ಯತೆ – ಕಹಳೆ ನ್ಯೂಸ್

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬಂದು 8 ದಿನಗಳು ಕಳೆದರೂ ಸರ್ಕಾರ ರಚನೆಯಾಗಿಲ್ಲ. ಹೀಗಾಗಿ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ.

ಈಗಿರುವ ವಿಧಾನಸಭೆ ಅವಧಿಯ ಅಧಿಕಾರಾವಧಿ ನವೆಂಬರ್ 8ಕ್ಕೆ ಕೊನೆಗೊಳ್ಳಲಿದೆ. ಈ ಕುರಿತು ಮಾತನಾಡಿರುವ ಬಿಜೆಪಿ ಮುಖಂಡ ಸುಧೀರ್ ಮುಂಗಂಟಿವರ್, ನವೆಂಬರ್ 7ರೊಳಗೆ ಸರ್ಕಾರ ರಚನೆಯಾಗದಿದ್ದರೆ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಶಿವಸೇನ ಮಾತುಕತೆ ವಿಳಂಬವಾಗಿದೆ. ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಮಾತುಕತೆ ನಡೆಸಿ, ಸರ್ಕಾರ ರಚಿಸಲಾಗುತ್ತದೆ. ರಾಜ್ಯದ ಜನತೆ ಯಾವುದೇ ಒಂದು ಪಕ್ಷಕ್ಕೆ ಬಹುಮತ ನೀಡಿಲ್ಲ. ಬಿಜೆಪಿ-ಶಿವಸೇನಯನ್ನು ಒಳಗೊಂಡ ಮೈತ್ರಿಗೆ ಜನರು ಬಹುಮತ ನೀಡಿದ್ದಾರೆ. ನಮ್ಮ ಮೈತ್ರಿ ಫೆವಿಕಾಲ್ ಅಥವಾ ಅಂಬುಜಾ ಸಿಮೆಂಟ್‍ಗಿಂತ ಬಲವಾಗಿದೆ ಎಂದು ಹೇಳಿದರು.

ಈ ನಡುವೆ ಮುಖ್ಯಮಂತ್ರಿ ಪಟ್ಟ ಬೇಕು ಅಂತ ಜೋತುಬಿದ್ದು ಬಿಜೆಪಿಗೆ ಬಿಸಿತುಪ್ಪವಾಗಿರುವ ಶಿವಸೇನೆ ಈಗ ಎನ್‍ಸಿಪಿ ಜೊತೆ ಡೈರೆಕ್ಟ್ ಡೀಲಿಂಗ್‍ಗೆ ಮುಂದಾಗಿದೆ. ಫೋನ್‍ಕಾಲ್ ಮೂಲಕ ಎನ್‍ಸಿಪಿ ಮುಖಂಡ ಶರದ್ ಪವಾರ್ ಜೊತೆ ಶಿವಸೇನ ನಾಯಕ ಉದ್ಧವ್ ಠಾಕ್ರೆ ಮಾತುಕತೆ ನಡೆಸಿದ್ದಾರೆ. ಈ ಬೆನ್ನಲ್ಲೇ ಶಿವಸೇನೆಯ ನಾಯಕರೇ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುತ್ತಾರೆ ಎಂದು ಶಿವಸೇನ ಸಂಜಯ್ ರಾವತ್ ಹೇಳಿದ್ದಾರೆ.

ಎನ್‍ಸಿಪಿ-ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲಿ ಕೂರಲಿವೆ ಎಂದು ಎನ್‍ಸಿಪಿಯ ಅಜಿತ್ ಪವಾರ್ ಒಂದು ಹೇಳಿಕೆ ಕೊಟ್ಟಿದ್ದಾರೆ. ಮತ್ತೊಂದು ಕಡೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮಹಾರಾಷ್ಟ್ರ ಕೈ ಮುಖಂಡರಾದ ಪೃಥ್ವಿರಾಜ್ ಚೌವ್ಹಾಣ್, ಅಶೋಕ್ ಚೌವ್ಹಾಣ್ ಮಾತುಕತೆ ನಡೆಸಿದ್ದಾರೆ. ಈ ಮಧ್ಯೆ, ಜಾರ್ಖಂಡ್‍ಗೆ ನವೆಂಬರ್ 30ರಿಂದ ಡಿಸೆಂಬರ್ 20ರವೆಗೆ 5 ಹಂತದಲ್ಲಿ ಚುನಾವಣೆಯಲ್ಲಿದ್ದು, ಡಿಸೆಂಬರ್ 23ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

Delhi: Maharashtra Congress leaders arrive at 10 Janpath to meet Congress Interim President Sonia Gandhi.

View image on TwitterView image on TwitterView image on Twitter