Recent Posts

Monday, January 20, 2025
ಸುದ್ದಿ

ಮಂಗಳೂರಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಸೆರೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಖರೀದಿಸಿ, ಮಂಗಳೂರಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಗಳಿಸಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ದೊರೆತ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಹೊಂದಿದ ಮೊಹಮ್ಮದ್ ಹನೀಫ್ ಮತ್ತು ಮೊಹಮ್ಮದ್ ಶಫೀಕ್ ಎಂಬುವವರನ್ನು ಮಂಗಳೂರು ನಗರದ ನೆಹರೂ ಮೈದಾನದ ಬಳಿಯ ಪುಟ್ಬಾಲ್ ಮೈದಾನದ ಪರಿಸರದಿಂದ ವಶಕ್ಕೆ ಪಡೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಗಳಿAದ ಒಟ್ಟು ರೂ. ೨೧,೦೦೦/- ಮೌಲ್ಯದ ೫೨೫ ಗ್ರಾಂ ನಿಷೇಧಿತ ಮಾದಕವಾದ ಗಾಂಜಾವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಜೊತೆಗೆ ೨ ಮೊಬೈಲ್ ಫೋನ್‌ಗಳು, ನಗದು ರೂ. ೨೦೦೦/- ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ ರೂ. ೩೩,೦೦೦/- ಆಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮೊಹಮ್ಮದ್ ಹನೀಫ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ಉತ್ತರ, ಕೊಣಾಜೆ ಪೊಲೀಸ್, ಮಂಗಳೂರು ದಕ್ಷಿಣ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬAಧಪಟ್ಟAತೆ ಪ್ರಕರಣ ದಾಖಲಾಗಿತ್ತು.