ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ : ಪ್ರತ್ಯೇಕ ಕಾನೂನು ರೂಪಿಸಲು ಸಾಧ್ಯವಿಲ್ಲ ಪಿಣರಾಯಿ ವಿಜಯನ್ ಸ್ಪಷ್ಟನೆ-ಕಹಳೆ ನ್ಯೂಸ್
ತಿರುವನಂತಪುರ : ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸ್ಪಷ್ಟ ಸಂದೇಶ ನೀಡಿದೆ. ಹೀಗಿರುವಾಗ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ಸಂಬಂಧ ವಿಧಾನಸಭೆಯಲ್ಲಿ ಯಾವುದೇ ಪ್ರತ್ಯೇಕ ಕಾನೂನು ರೂಪಿಸಲು ಸಾಧ್ಯವಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಸ್ಪಷ್ಟಪಡಿಸಿದ್ದಾರೆ.
ಇಂದು ಮಾತನಾಡಿರುವ ಕೇರಳ ಸಿಎಂ, ಜಲ್ಲಿಕಟ್ಟು, ಕಂಬಳ ರೀತಿ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಕುರಿತು ರಾಜ್ಯದಲ್ಲಿ ಸುಪ್ರೀಂ ಕೋರ್ಟ್‌ಗೆ ವಿರುದ್ಧವಾಗಿ ಕಾನೂನು ರೂಪಿಸಲು ಆಗುವುದಿಲ್ಲ. ಸುಪ್ರೀಂ ಕೋರ್ಟ್ ತೀರ್ಪನ್ನು ಪಾಲಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ.
ಮಹಿಳೆಯರ ಪ್ರವೇಶ ನಿರಾಕರಣೆಯು ಅವರ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಯಾವುದೇ ಮಹಿಳೆಯನ್ನು ದೇಗುಲ ಪ್ರವೇಶಕ್ಕೆ ರಾಜ್ಯ ಸರ್ಕಾರ ಬಲವಂತ ಮಾಡುವುದಿಲ್ಲ. ಅವರು ಇಚ್ಛಿಸಿದರೆ ಹೋಗಬಹುದು ಎಂದು ತಿಳಿಸಿದ್ದಾರೆ….