ಭಾರತದ ಮಾಜಿ ನಾಯಕ ಎಂ.ಎಸ್. ಧೋನಿ ಯಾವಾಗ ಮೈದಾನಕ್ಕೆ ಬರ್ತಾರೆಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡ್ತಿದೆ. ಈ ಮಧ್ಯೆ ಧೋನಿ ಅಭಿಮಾನಿಗಳಿಗೆ ಖುಷಿ ಸುದ್ದಿ ಸಿಕ್ಕಿದೆ. ಧೋನಿ ಬಾಂಗ್ಲಾ ದೇಶದ ವಿರುದ್ಧ ನಡೆಯುವ ಪಂದ್ಯದಲ್ಲಿ ಮೈದಾನಕ್ಕೆ ಇಳಿಯುತ್ತಿಲ್ಲ. ಆದ್ರೆ ಧೋನಿ ಧ್ವನಿ ಕೇಳುವ ಅವಕಾಶ ಅಭಿಮಾನಿಗಳಿಗೆ ಸಿಗ್ತಿದೆ.
ಭಾರತ-ಬಾಂಗ್ಲಾ ವಿರುದ್ಧ ನಡೆಯುವ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಧೋನಿ ಕಾಣಿಸಿಕೊಳ್ಳಲಿದ್ದಾರೆ. ಧೋನಿ ಆಟಗಾರನಾಗಿಯಲ್ಲ, ಕಾಮೆಂಟೇಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಧೋನಿ ಟೆಸ್ಟ್ ಪಂದ್ಯದ ವೇಳೆ ಅತಿಥಿ ಕಾಮೆಂಟೇಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ಬಾಂಗ್ಲಾ ದೇಶದ ವಿರುದ್ಧ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ. ಕೊಹ್ಲಿ ನಾಯಕತ್ವದಲ್ಲಿ ಬಾಂಗ್ಲಾವನ್ನು ಟೀಂ ಇಂಡಿಯಾ ಎದುರಿಸಲಿದೆ. ನವೆಂಬರ್ 22ರಿಂದ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ.