Tuesday, January 21, 2025
ಸುದ್ದಿ

ಅಯೋಧ್ಯೆ ತೀರ್ಪು ನೀಡಿದ ಪಂಚಪೀಠದ ‘ನ್ಯಾ. ಅಬ್ದುಲ್ ನಜೀರ್’ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯವರು! – ಕಹಳೆ ನ್ಯೂಸ್

ಮಂಗಳೂರು: ನ 09 : ಭಾರತ ಮಾತ್ರವಲ್ಲ ವಿಶ್ವವೇ ಎದುರು ನೋಡುತ್ತಿದ್ದ ಅಯೋಧ್ಯೆ ವಿವಾದಕ್ಕೆ ಅಂತ್ಯ ಹಾಡಿರುವ ಸುಪ್ರೀಂಕೋರ್ಟ್, ಐತಿಹಾಸಿಕ ತೀರ್ಪು ನೀಡಿದೆ. ವಿವಾದಿತ ಪ್ರದೇಶದಲ್ಲಿ ಮಂದಿರ ನಿರ್ಮಾಣಕ್ಕೆ ಉಚ್ಛ ನ್ಯಾಯಾಲಯ ಗ್ರೀನ್ ಸಿಗ್ನಲ್ ನೀಡಿದೆ. ಆದರೆ ಸುಪ್ರೀಂ ನ ಸಂವಿಧಾನಿಕ ಪಂಚಪೀಠವೂ ಸಿಜೆಐ ಗೋಗೊಯಿ, ಜಸ್ಟೀಸ್ ಎಸ್ ಎ ಬೋಬ್ಡೆ, ಜಸ್ಟೀಸ್ ಡಿವೈ ಚಂದ್ರಚೂಡ್, ಜಸ್ಟೀಸ್ ಅಶೋಕ್ ಭೂಷಣ್ ಹಾಗೂ ಜಸ್ಟೀಸ್ ಅಬ್ದುಲ್ ನಝೀರ್ ಸದಸ್ಯರನ್ನು ಒಳಗೊಂಡಿದೆ.

ಪಂಚಪೀಠದ ಸದಸ್ಯರಲ್ಲಿ ಒಬ್ಬರಾಗಿರುವ ನ್ಯಾ. ಅಬ್ದುಲ್ ನಜೀರ್ ಕರಾವಳಿಯವರು. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಸಮೀಪದ ಬೆಳುವಾಯಿ ಅವರ ಹುಟ್ಟೂರು. ಜ. 5, 1958ರಲ್ಲಿ ಹುಟ್ಟಿದ ಇವರು ಪ್ರಾಥಮಿಕ ಶಿಕ್ಷಣ ಮುಗಿಸಿ ಆ ಬಳಿಕ ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದರು. ಆ ಬಳಿಕ ನಂತರ ಮಂಗಳೂರಿನ ಎಸ್ ಡಿಎಂ ಕಾಲೇಜಿನಲ್ಲಿ ಕಾನೂನು ಪದವಿ ಅಭ್ಯಾಸಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

1983ರಲ್ಲಿ ಅಬ್ದುಲ್ ನಜೀರ್ ಅವರು ಕರ್ನಾಟಕ ಹೈಕೋರ್ಟ್ ನಲ್ಲಿ ತಮ್ಮ ವಕೀಲಗಾರಿಕೆಯ ಅಭ್ಯಾಸ ಆರಂಭಿಸಿದರು. 2003ರವರೆಗೆ ಕರ್ನಾಟಕದ ಹೈಕೋರ್ಟ್ ನಲ್ಲಿ ವಕೀಲರಾಗಿ ಕಾರ್ಯ ನಿರ್ವಹಿಸಿದ್ದರು. 2003ರಲ್ಲಿ ಹೈಕೋರ್ಟ್ ನ ಜಡ್ಜಾಗಿ ಆಯ್ಕೆಯಾದ ಇವರು 2017ರಲ್ಲಿ ಸುಪ್ರೀಂ ಕೋರ್ಟ್ ಜಡ್ಜ್ ಆಗಿ ನೇಮಕವಾಗಿದ್ದರು. ಐತಿಹಾಸಿಕ ತ್ರಿವಳಿ ತಲಾಖ್ ಪ್ರಕರಣದ ಪಂಚ ಸದಸ್ಯ ಪೀಠದ ಏಕಮಾತ್ರ ಮುಸ್ಲಿಂ ನ್ಯಾಯಾಧೀಶರಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು