ಉಡುಪಿ : ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ರಾಣೆ ಬೆನ್ನೂರಿನಲ್ಲಿ ರಾಜೀನಾಮೆ ಪತ್ರ ಸ್ವೀಕರಿಸಿರುವ ಸ್ಪೀಕರ್ ಕೆ.ಬಿ.ಕೋಳಿವಾಡ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರದ ಬಿಜೆಪಿ ಅಭ್ಯರ್ಥಿ ಎಂದು ಯಡಿಯೂರಪ್ಪ ಈಗಾಗಲೇ ಘೋಷಣೆ ಮಾಡಿದ್ದು, 2013ರ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಈಗ ಮರಳಿ ಮಾತೃ ಪಕ್ಷ ಬಿಜೆಪಿಗೆ ಸೇರಲು ಸಜ್ಜಾಗಿದ್ದಾರೆ.
ಫೆಬ್ರವರಿ 4ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಹಾಲಾಡಿಯವರು ಮರಳಿ ಮಾತೃ ಪಕ್ಷಕ್ಕೆ ಸೇರಲಿದ್ದಾರೆ ಎನ್ನಲಾಗಿದೆ.
ಸರಳ ವ್ಯಕ್ತಿತ್ವ, ನಿಷ್ಕಳಂಕ ರಾಜಕಾರಣಿಯಾಗಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಪಾರ ಜನ ಬೆಂಬಲ ಹೊಂದಿದ್ದಾರೆ. ಕಳೆದ ಬಾರಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂತ್ರಿ ಸ್ಥಾನ ಸಿಕ್ಕಿಲ್ಲ ಎಂದು ಮುನಿಸಿಕೊಂಡು ಯಡಿಯೂರಪ್ಪ ವಿರುದ್ಧವೇ ಬಂಡಾಯದ ಬಾವುಟ ಹಾರಿಸಿ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದರು.
ವರದಿ : ಕಹಳೆ ನ್ಯೂಸ್