Tuesday, January 21, 2025
ಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಬಹುಮಾನ ವಿತರಣಾ ಕಾರ್ಯಕ್ರಮ- ಕಹಳೆ ನ್ಯೂಸ್

ವಿದ್ಯಾರ್ಥಿಗಳು ರಚನಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಮೂಲಕ ಶಿಕ್ಷಣ ಸಂಸ್ಥೆಯ ಸರ್ವಾಂಗೀಣ ಬೆಳವಣಿಗೆಯಲ್ಲಿ ಸಹಕರಿಸಬೇಕು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಸಮೂಹಮಾಧ್ಯಮಗಳನ್ನು ಸಕಾರಾತ್ಮಕವಾಗಿ ಉಪಯೋಗಿಸಿಕೊಳ್ಳಬೇಕು ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ, ಯುವ ಉದ್ಯಮಿ, ನಟ-ನಿರ್ದೇಶಕ ಶ್ರೀಮುಖ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ 2019ರ ಪ್ರಯುಕ್ತ ಅಯೋಜಿಸಲಾದ ಬಹುಮಾನ ವಿತರಣಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಇಂದಿನ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳಿಗೆ ಇಂಟರ್‍ನೆಟ್ ಮೂಲಕ ಸಾಕಷ್ಟು ಮಾಹಿತಿಗಳು ಸುಲಭವಾಗಿ ಲಭ್ಯವಾಗುತ್ತವೆ. ಆದರೆ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಜನೆಗೆ ಅಗತ್ಯವಿರುವ ಮಾಹಿತಿಯನ್ನು ಮಾತ್ರ ಪಡೆದುಕೊಂಡು ಭವಿಷ್ಯವನ್ನು ಉಜ್ವಲಗೊಳಿಸಬೇಕು. ಪ್ರತಿಯೊಂದು ಕೆಲಸದಲ್ಲಿಯೂ ಶಿಸ್ತು, ಪರಿಶ್ರಮ ಮತ್ತು ಗುಣಮಟ್ಟವನ್ನು ಕಾಯ್ದುಕೊಂಡಾಗ ಯಶಸ್ಸು ಖಂಡಿತ. ಯಾವುದೇ ಸಂದರ್ಭದಲ್ಲಿ ಇತರರನ್ನು ಟೀಕಿಸದೆ, ಪರಸ್ಪರ ಒಮ್ಮತದಿಂದ ಕಾರ್ಯ ನಿರ್ವಹಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಪರಂಪರೆ ಮತ್ತು ಪರಿಶ್ರಮಗಳನ್ನು ನೆಲೆಯಾಗಿಟ್ಟು ವಿದ್ಯಾರ್ಥಿಗಳು ಬೆಳೆಯಬೇಕು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹಿರಿಯ ಶಿಕ್ಷಕಿ ಲೀಲಾವತಿ ಹಂದ್ರಟ್ಟ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಪ್ರತಿಭೆ ಅಡಕವಾಗಿರುತ್ತದೆ. ಸತತ ಪರಿಶ್ರಮದೊಂದಿಗೆ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಬೇಕು. ಬಹುಮಾನಗಳನ್ನು ಗೆಲ್ಲುವುದಕ್ಕಿಂತ ಭಾಗವಹಿಸುವುದು ಮುಖ್ಯ. ಪ್ರಯತ್ನ ನಿರಂತರವಾಗಿರಬೇಕು. ಧನಾತ್ಮಕ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ಸಿಕ್ಕಿದ ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕು. ಸಾಮಾಜಿಕ ಮೌಲ್ಯಗಳನ್ನು ಪಾಲಿಸಬೇಕು. ಬದುಕಿನಲ್ಲಿ ಸೋಲು ಬಂದಾಗ ಅದನ್ನು ಸವಾಲಾಗಿ ಸ್ವೀಕರಿಸಿ ಆತ್ಮವಿಶ್ವಾಸದೊಂದಿಗೆ ಮುನ್ನುಗ್ಗಬೇಕು ಎಂದು ಅಭಿಪ್ರಾಯಪಟ್ಟರು.

ಆಡಳಿತ ಮಂಡಳಿಯ ಸದಸ್ಯೆ ಶ್ರೀಮತಿ ವತ್ಸಲಾ ರಾಜ್ಞಿ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಮುಂದಿನ ಜೀವನಕ್ಕೆ ಅಗತ್ಯವಿರುವ ಭದ್ರ ಬುನಾದಿಯನ್ನು ಅಳವಡಿಸಿಕೊಳ್ಳಬೇಕು. ವೃತ್ತಿ ಮತ್ತು ಪ್ರವೃತ್ತಿಗಳಲ್ಲಿ ಅಭಿರುಚಿಯನ್ನು ಇರಿಸಿಕೊಳ್ಳಬೇಕು. ಎಲ್ಲಾ ರೀತಿಯ ವ್ಯವಹಾರಗಳಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿಯನ್ನು ಅಳವಡಿಸಿಕೊಂಡಾಗ ಸಾಮಾಜಿಕ ಬದುಕು ಸುಂದರವಾಗುತ್ತದೆ ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ಕಾನೂನು ಕಾಲೇಜಿನ ಸಂಚಾಲಕ ವಿಜಯ ನಾರಾಯಣ ಮಾತನಾಡಿ ಹದಿಹರೆಯವು ಬದುಕನ್ನು ಅರ್ಥಪೂರ್ಣವಾಗಿ ತೊಡಗಿಸಿಕೊಳ್ಳಬೇಕಾದ ವಯಸ್ಸು. ಹೆತ್ತವರ ಮತ್ತು ಶಿಕ್ಷಕರ ಪ್ರೋತ್ಸಾಹದಿಂದ ಸಾಧನೆಯ ಮೆಟ್ಟಿಲನ್ನು ಹತ್ತುವ ಪ್ರಯತ್ನ ನಮ್ಮದಾಗಬೇಕು. ಸ್ವಾರ್ಥಚಿಂತನೆಯನ್ನು ಬದಿಗಿಟ್ಟು ಇತರರಿಗೆ ನೆರಳಾಗುವ ಪರಿಕಲ್ಪನೆ ನಮ್ಮೊಳಗೆ ಬೆಳೆಯಬೇಕು ಎಂದರು.


ಸಾಂಸ್ಕøತಿಕ ಸ್ಪರ್ಧೆಯಲ್ಲಿ ವಿಜೇತರಾದ ಪಟ್ಟಿಯನ್ನು ಉಪನ್ಯಾಸಕಿ ತ್ರಿವೇಣಿ, ಕ್ರೀಡಾಕ್ಷೇತ್ರದಲ್ಲಿ ವಿಜೇತರಾದವರ ಪಟ್ಟಿಯನ್ನು ರವಿಶಂಕರ್, ವಿಜ್ಞಾನ ಸಂಘ ಆಯೋಜಿಸಿದ ಸ್ಪರ್ಧೆಗಳಲ್ಲಿ ವಿಜೇತಾರಾದವರ ಪಟ್ಟಿಯನ್ನು ಹರ್ಷಿತಾ ವಾಚಿಸಿದರು. ಉಪನ್ಯಾಸಕಿ ಪುಷ್ಪಲತಾ ನಿರೂಪಿಸಿದರು. ರತ್ನಾವತಿ ಸ್ವಾಗತಿಸಿ ಜಯಲಕ್ಷ್ಮಿ ವಂದಿಸಿದರು.