Tuesday, January 21, 2025
ಸುದ್ದಿ

ಗಂದೇರ್‌ಬಾಲ್‌ನಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ-ಕಹಳೆ ನ್ಯೂಸ್

ಜಮ್ಮು ಮತ್ತು ಕಾಶ್ಮೀರದ ಗಂದೇರ್‌ಬಾಲ್‌ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್’ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. 

ಜಮ್ಮು ಮತ್ತು ಕಾಶ್ಮೀರದ ಗಂದೇರ್‌ಬಾಲ್‌ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್’ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹತ್ಯೆಯಾಗಿರುವ ಇಬ್ಬರು ಉಗ್ರರು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆಂದು ಹೇಳಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗಂದೇರ್‌ಬಾಲ್‌ ನಲ್ಲಿ ಉಗ್ರರು ಅಡಗಿ ಕುಳಿತಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಬಳಿಕ ಕಾರ್ಯಾಚರಣೆಯನ್ನು ಭದ್ರತಾಪಡೆಗಳು ಎನ್’ಕೌಂಟರ್ ಆಗಿ ಪರಿವರ್ತಿಸಿ ಉಗ್ರರನ್ನು ಸದೆಬಡಿದೆದೆ.

ಸ್ಥಳದಲ್ಲಿ ಈಗಲೂ ಕಾರ್ಯಾಚರಣೆ ಮುಂದುವರೆದಿದ್ದು, ಈಗಾಗಲೂ ಸ್ಥಳದಲ್ಲಿ 2-3 ಉಗ್ರರಿರುವ ಶಂಕೆಗಳು ವ್ಯಕ್ತವಾಗಿದೆ. ಎನ್’ಕೌಂಟರ್ ಸ್ಧಳದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸಿಆರ್’ಪಿಎಫ್ ಮತ್ತು ಸೇನಾಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿದುಬಂದಿದೆ.