ಬ್ರೇಕಿಂಗ್ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ಎತ್ತಿಹಿಡಿದ ‘ಸುಪ್ರೀಂ ಕೋರ್ಟ್’, ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ-ಕಹಳೆ ನ್ಯೂಸ್
ನವದೆಹಲಿ : ರಾಜ್ಯ ವಿಧಾನಸಭೆಯ ಈ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶ ಪ್ರಶ್ನಿಸಿ ಅನರ್ಹರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಕ್ತಾಯಗೊಂಡು ಇಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ಪ್ರಕಟಣೆ ಮಾಡಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ಪೀಠ ಇಂದು ಈ ಹಿಂದೆ ರಾಜ್ಯ ವಿಧಾನಸಭೆಯ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಅವರ ಆದೇಶವನ್ನು ಎತ್ತಿ ಹಿಡಿದಿದೆ. ಚುನಾವಣೆಯಲ್ಲಿ ಕಣಕ್ಕೆ ಇಳಿಯಲು ಅವಕಾಶ ನೀಡಿದೆ.
ಏನಾಗಿತ್ತು? ಹಿಂದಿನ ವಿಧಾನಸಭೆಯ ಸ್ಪೀಕರ್ ಕೆ.ಆರ್.ರಮೇಶ್‍ಕುಮಾರ್ ಅವರು ಕಾಂಗ್ರೆಸ್‍ನ 13, ಜೆಡಿಎಸ್ 3 ಹಾಗೂ ಪಕ್ಷೇತರ ಶಾಸಕ ಆರ್.ಶಂಕರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದರ ಜೊತೆಗೆ ಈ ವಿಧಾನಸಭೆಯ ಅವಧಿ ಮುಗಿಯುವವರೆಗೂ ಅವರು ಯಾವುದೇ ರೀತಿಯ ಸಾಂವಿಧಾನಿಕ ಸ್ಥಾನ ಅಲಂಕರಿಸುವಂತಿಲ್ಲ ಮತ್ತು ವಿಧಾನಸಭೆ ಪ್ರವೇಶಿಸುವಂತಿಲ್ಲ ಎಂದು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಎರಡೂ ಕಡೆಯ ವಾದವನ್ನು ಆಲಿಸಿದ ಸುಪ್ರೀಂಕೋರ್ಟ್ ಇಂದು ಅಂತಿಮ ತೀರ್ಪು ಪ್ರಕಟಣೆ ಮಾಡಿದೆ.
ನ್ಯಾಯಮೂರ್ತಿಗಳಾದ ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ಪೀಠ ಇದಾಗಿತ್ತು.