ಶಿಕ್ಷಣ ಕ್ಷೇತ್ರದಲ್ಲಿಮಾಡುವ ಕೆಲಸ ಧನಾತ್ಮಕವಾಗಿರುತ್ತದೆ; ಕಲ್ಲಡ್ಕದಲ್ಲಿ ಜಯರಾಜ್ ಎಸ್ ಬಂಗೇರ ಹೇಳಿಕೆ- ಕಹಳೆ ನ್ಯೂಸ್
ಕಲ್ಲಡ್ಕ : ಶಿಕ್ಷಣ ಕ್ಷೇತ್ರದಲ್ಲಿ ಮಾಡುವ ಕೆಲಸ ಕಾರ್ಯಗಳು ಧನಾತ್ಮಕವಾಗಿ ಹೆಚ್ಚು ಪರಿಣಾಮ ಕಾರಿಯಾಗಿರುತ್ತವೆ. ವಿಧ್ಯಾರ್ಥಿ ಗಳಿಗೆ ಪ್ರಾಥಮಿಕ ಹಂತದಲ್ಲಿಯೇ ದಿನ ನಿತ್ಯ ವಾರ್ತಾಪತ್ರಿಕೆ ಮತ್ತು ಇತರ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸುವುದರಿಂದ ಸಾಮಾನ್ಯ ಜ್ಞಾನ ಬೆಳೆಯುವಲ್ಲಿ ಸಹಕಾರಿಯಾಗುತ್ತದೆ.
ವೈಜ್ಞಾನಿಕವಾಗಿ ಮತ್ತು ತಾಂತ್ರಿಕವಾಗಿ ಬೆಳೆಯುತ್ತಿರುವ ಈ ಜಗತ್ತಿನಲ್ಲಿ ನಾವೂ ನಮ್ಮನ್ನು ನವೀಕರಿಸಿದಾಗ ಮಾತ್ರ ಬೆಳೆಯಲು ಸಾಧ್ಯ ಎಂದು ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷ ಜಯರಾಜ್ ಎಸ್ ಬಂಗೇರ ರವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇನ್ನೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀಯುತ ಸಂಜೀವ್ ಮೂಲ್ಯ ವಹಿಸಿದ್ದರು .ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್‍ನ ಕಾರ್ಯದರ್ಶಿ ಪಲ್ಲವಿ ಕಾರಂತ, ರೋಟರಿ ಆನ್ನ್ಸ್ ಅಧ್ಯಕ್ಷ ವಿಂದ್ಯಾ ಎಸ್ ರೈ ,ರೋಟರಿಯನ್ ಗಳಾದ ಸುಕುಮಾರ ಬಂಟ್ವಾಳ, ನಾರಾಯಣ ಸಿ ಪೆರ್ನೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಗೌಡ ಮೈರ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು .
ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಎಸ್ ಕೆ ಸ್ವಾಗತಿಸಿ, ಶಿಕ್ಷಕಿ ಚೈತ್ರಾ ವಂದಿಸಿದರು .ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕಿಯರು ಸಹಕರಿಸಿದರು ನಂತರ ಸಂಜೆ ತನಕ ಮಕ್ಕಳೊಂದಿಗೆ ಇದ್ದು ಮಕ್ಕಳಿಗೆ ವಿವಿಧ ರೀತಿಯ ಒಳಾಂಗಣ ಹಾಗೂ ಹೊರಾಂಗಣ ಆಟಗಳನ್ನು ಆಡಿಸಿ ಬಹುಮಾನ ಹಾಗೂ ಸಿಹಿ ತಿಂಡಿ ನೀಡಿ ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು .
ಕಾರ್ಯಕ್ರಮದ ಮಧ್ಯೆ ಶಾಲಾ ವೀಕ್ಷಣೆಗೆ ಬೇಟಿ ನೀಡಿದ ಕೊಪ್ಪಳ ಜಿಲ್ಲಾ ಕುಷ್ಟಗಿ ತಾಲೂಕಿನ ಶಾಲಾ ಉಸ್ತುವಾರಿ ಅಧಿಕಾರಿಗಳ ತಂಡ ಕಾರ್ಯಕ್ರಮವನ್ನು ವೀಕ್ಷಿಸಿ ಮಜಿ ಶಾಲೆಗೆ ಸಂಘ ಸಂಸ್ಥೆಗಳು ನೀಡುವ ಸರಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು