Sunday, November 24, 2024
ಸುದ್ದಿ

ಬಂಟ್ವಾಳ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ನವೆಂಬರ್ ೧೬ರಂದು “ಶೈಕ್ಷಣಿಕ ಕ್ಷೇತ್ರ ಭೇಟಿ” ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಕೊಪ್ಪಳ ಜಿಲ್ಲಾ ಕುಷ್ಟಗಿ ತಾಲೂಕಿನ ಶಿಕ್ಷಣ ಸಂಯೋಜಕರು, ಕ್ಷೇತ್ರ ಸಂಪನ್ಮೂಲ ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿಗಳ ಹಾಗೂ ಶಾಲಾ ಉಸ್ತುವಾರಿ ಅಧಿಕಾರಿಗಳ ತಂಡ ಅಜೀಂ ಪ್ರೇಮ್ ಜೀ ಪೌಂಡೇಶನ್ ಸಹಯೋಗದಲ್ಲಿ, ನವೆಂಬರ್ ೧೬ರಂದು “ಶೈಕ್ಷಣಿಕ ಕ್ಷೇತ್ರ ಭೇಟಿ” ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮಕ್ಕೆ ಬಂಟ್ವಾಳ ತಾಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ, ಶಾಲೆಗೆ ಭೇಟಿ ನೀಡಿದರು. ಶಾಲಾ ಮುಖ್ಯಶಿಕ್ಷಕ ಶ್ರೀಯುತ ನಾರಾಯಣ ಪೂಜಾರಿ ಶಾಲಾ ಶೈಕ್ಷಣಿಕ ಹಾಗೂ ಭೌತಿಕ ಮಾಹಿತಿ, ಶಿಕ್ಷಕಿ ಸಂಗೀತ ಸರ್ಮ ಮಕ್ಕಳ ಕೃಷಿ ಚಟುವಟಿಕೆ ಹಾಗೂ ಪರಿಸರ ಜಾಗೃತಿಯ ಬಗ್ಗೆ ಮಾಹಿತಿಯನ್ನು ನೀಡಿದರು

ಜಾಹೀರಾತು
ಜಾಹೀರಾತು
ಜಾಹೀರಾತು

.ಈ ಸಂದರ್ಭದಲ್ಲಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಜಿ ಶಾಲೆಗೆ ಸಂಘ-ಸAಸ್ಥೆಗಳು ನೀಡುತ್ತಿರುವ ಸಹಕಾರ ಹಾಗೂ ಶಾಲೆಯ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಗೆ ಕಳೆದ ಮೂರು ವರ್ಷಗಳಿಂದ ಉಚಿತ ತರಕಾರಿಗಳನ್ನು ನೀಡುತ್ತಿರುವ ಚಂದ್ರಿಕಾ ವೆಜಿಟೇಬಲ್‌ನ ಮಾಲಕ ಮಹಮ್ಮದ್ ಶರೀಫ್ ದಂಪತಿ ಸಮೇತ ಅನಿರೀಕ್ಷಿತ ಭೇಟಿ ನೀಡಿದ್ದು ಅವರ ಸಹಕಾರವನ್ನು ಮೆಚ್ಚಿ ಅವರೊಂದಿಗೆ ಮಕ್ಕಳ ಜೊತೆ ಸಾಮೂಹಿಕ ಭೋಜನದಲ್ಲಿ ಪಾಲ್ಗೊಂಡು ಶಾಲಾ ಬಿಸಿ ಊಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಜಯರಾಜ್ ಎಸ್ ಬಂಗೇರ, ಕಾರ್ಯದರ್ಶಿ ಪಲ್ಲವಿ ಕಾರಂತ್, ರೋಟರಿ ಆನ್ಸ್ ಅಧ್ಯಕ್ಷ ವಿದ್ಯಾವತಿ ಎಸ್ ರೈ, ರೋಟರಿಯನ್ ಗಳಾದ ಸುಕುಮಾರ್ ಬಂಟ್ವಾಳ, ನಾರಾಯಣ ಸಿ ಪೆರ್ನೆ, ಶಾಲಾ ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಚಿನ್ನ ಮೈರಾ, ಹಾಗೂ ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು.