Wednesday, January 22, 2025
ರಾಜಕೀಯ

ಬಿಎಸ್ವೈ ಸಿಎಂ ಆಗಲು ತ್ಯಾಗ ಮಾಡಿದವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮದು ‘ ಶೋಭಾ’ -ಕಹಳೆ ನ್ಯೂಸ್

ಕೆಂಗೇರಿ:ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕೆಂಬ ಉದ್ದೇಶದಿಂದ ರಾಜೀನಾಮೆ ನೀಡಿ ಅಧಿಕಾರ ತ್ಯಜಿಸಿ ಬಂದಿರುವ ಹದಿನೇಳು ಶಾಸಕರ ಬೆಂಬಲಕ್ಕೆ ನಿಂತು ಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಜಿ ಸಚಿವೆ ಹಾಗೂ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಹೇಳಿದರು.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಯಶವಂತಪುರ ಕ್ಷೇತ್ರ ಬಿ.ಜೆ.ಪಿ ಕಚೇರಿಯ ನಾಗದೇವನಹಳ್ಳಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಪಕ್ಷಗಳ ನಡುವೆ ಭಿನ್ನಾಬಿಪ್ರಾಯ ಸಹಜ. ಈಗ ಎಸ್.ಟಿ.ಸೋಮಶೇಖರ್ ನಮ್ಮ ಪಕ್ಷದ ಸದಸ್ಯರಾಗುವ ಮೂಲಕ ಎಲ್ಲದಕ್ಕೂ ತೆರೆ ಎಳೆದಿದ್ದಾರೆ. ಕೆಳ ಹಂತದ ಕಾರ್ಯಕರ್ತರು ಗೊಂದಲಕ್ಕೆ ಅವಕಾಶ ಮಾಡಿಕೊಳ್ಳದೆ ಬಿಜೆಪಿ ಸರ್ಕಾರವನ್ನು ಉಳಿಸಲು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಯಡಿಯೂರಪ್ಪ ಅವರ ಸರ್ಕಾರವನ್ನು ಸುಭದ್ರಗೊಳಿಸಬೇಕೆಂದು ಮನವಿ ಮಾಡಿದರು.
ಯಶವಂತಪುರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಮಾತನಾಡಿ, ಜನತೆಯ ನಿರೀಕ್ಷೆಗೆ ತಕ್ಕಂತೆ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಹಲವಾರು ಬಾರಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ನಾಮಕಾವಸ್ಥೆಗೆ ಬಿಡಿಎ ಅಧ್ಯಕ್ಷ ಮಾಡಿ ಕ್ಷೇತ್ರದ ಜನತೆಯ ಯಾವುದೇ ಕೆಲಸವನ್ನು ಮಾಡಿಕೊಡಲು ಅವಕಾಶ ನೀಡದ ಫೈವ್ ಸ್ಟಾರ್ ಆಡಳಿತ ವ್ಯವಸ್ಥೆಯನ್ನು ಕೊನೆಗಾಣಿಸಬೇಕೆಂದು ರಾಜೀನಾಮೆ ನೀಡಿದ್ದೆವು ಎಂದು ಸ್ಪಷ್ಟಪಡಿಸಿದರು.

ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಅಧಿಕಾರಕ್ಕೆ ಅಂಟಿಕೊಳ್ಳದೆ ಕ್ಷೇತ್ರದ ಜನತೆಯ ಋಣ ತೀರಿಸಲು ಅನಿವಾರ್ಯವಾಗಿ ಯಡಿಯೂರಪ್ಪನವರಿಗೆ ಬೆಂಬಲಿಸ ಲಾಯಿತು. ಬಿಜೆಪಿ ಕಾರ್ಯಕರ್ತರಾಗಲಿ, ನನ್ನ ಬೆಂಬಲಿಗರಾಗಲೀ, ಯಾವುದೇ ಕಾರಣಕ್ಕೂ ಸಣ್ಣಪುಟ್ಟ ವೈಮನಸ್ಯಗಳನ್ನು ಮಾಡಿಕೊಡುವ ಅವಶ್ಯಕತೆ ಇಲ್ಲ. ನಮ್ಮ ಉದ್ದೇಶ ಬಿಜೆಪಿ ಸರ್ಕಾರ ಮೂರೂವರೆ ವರ್ಷ ಸುಭದ್ರವಾಗಿ ಆಡಳಿತ ನಡೆಸುವುದು ಹಾಗೂ ಕ್ಷೇತ್ರದ ಅಭಿವೃದ್ಧಿಯೇ ಆಗಿದೆ ಎಂದರು.

ಕೇಂದ್ರ ಸಚಿವ ಸದಾನಂದಗೌಡ, ಶೋಭಾ ಕರಂದ್ಲಾಜೆ, ಆರ್.ಅಶೋಕ್ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಸಮಸ್ಯೆಗಳಿಗೆ ಮುಖಂಡರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ, ಬಮೂಲ್ ಮಾಜಿ ನಿರ್ದೇಶಕ ಪಂಚಲಿಂಗಯ್ಯ. ಕೊಡಿಗೇಹಳ್ಳಿ ಗ್ರಾ. ಪಂ. ಮಾಜಿ ಅಧ್ಯಕ್ಷ ಡಾ.ಎನ್.ನಂಜುಂಡೇಶ್, ಬಿಬಿಎಂಪಿ ಸದಸ್ಯರಾದ ಶಾರದಾ ಮುನಿರಾಜು, ರಾಜಣ್ಣ, ಆರ್ಯ ಶ್ರೀನಿವಾಸ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.