Monday, January 20, 2025
ಸುದ್ದಿ

ಸುಪ್ರೀಂ ಕೋರ್ಟ್ ನ 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಎಸ್ ಎ ಬೊಬ್ಡೆ ಪದಗ್ರಹಣ – ಕಹಳೆ ನ್ಯೂಸ್

ನವದೆಹಲಿ: ಸುಪ್ರೀಂ ಕೋರ್ಟ್ ನ 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೋಮವಾರ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ನ್ಯಾಯಮೂರ್ತಿ ಬೊಬ್ಡೆ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶರದ ಅರವಿಂದ್ ಬೊಬ್ಡೆ ಅವರು, ನಿನ್ನೆ ನಿವೃತ್ತರಾದ ರಂಜನ್ ಗೊಗೊಯಿ ಅವರ ಉತ್ತರಾಧಿಕಾರಿಯಾಗಿದ್ದಾರೆ. ನ್ಯಾಯಮೂರ್ತಿ ಬೊಬ್ಡೆ ಅವರು ಅಯೋಧ್ಯೆ ಸೇರಿದಂತೆ ಹಲವು ಮಹತ್ವದ ಪ್ರಕರಣಗಳಲ್ಲಿ ತೀರ್ಪು ನೀಡಿದ್ದಾರೆ. ಇಂದಿನಿಂದ 17 ತಿಂಗಳವರೆಗೆ ಅವರು ಅಧಿಕಾರದಲ್ಲಿ ಇರಲಿದ್ದಾರೆ. 2021ರ ಏಪ್ರಿಲ್ 23ರಂದು ಅವರು ನಿವೃತ್ತರಾಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು