Recent Posts

Sunday, April 13, 2025
ಸುದ್ದಿ

ಕೇರಳ ಕಲೋತ್ಸವಕ್ಕೆ ತೀರ್ಪುಗಾರರಾಗಿ ಉಪನ್ಯಾಸಕ ಶರತ್ ಆಳ್ವ ಚನಿಲ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ಕೇರಳದ ಮಲಪ್ಪುರಂನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕಲೋತ್ಸವ ಕಾರ್ಯಕ್ರಮದ, ತೀರ್ಪುಗಾರರಾಗಿ ಪುತ್ತೂರಿನ ಮ್ಯಾದೇ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಶರತ್ ಆಳ್ವ ಚನಿಲ ಆಯ್ಕೆಯಾಗಿದ್ದಾರೆ.

ಕನ್ನಡ ವಿಷಯದ ವಿವಿದ ಸ್ಪರ್ಧೆಗಳಲ್ಲಿ ತೀರ್ಪುಗಾರಿಕೆ ಮಾಡಲಿರುವ, ಇವರು ಯಕ್ಷಗಾನ ಕಲಾವಿದರೂ ಆಗಿದ್ದು ವಿವಿಧ ಕ್ಷೇತ್ರಗಳಲ್ಲಿ ಪ್ರತಿಭಾನ್ವಿತರಾಗಿದ್ದಾರೆ. ಸುದ್ದಿ ಪುತ್ತೂರು ಯುಟ್ಯೂಬ್ ವಾಹಿನಿಯಲ್ಲಿಯೂ ಕಾರ್ಯನಿರ್ವಹಿಸುತ್ತಿರುವ ಇವರು ಪೆರ್ವತ್ತೊಡಿಗುತ್ತು ರಘುರಾಮ ಆಳ್ವ ಮತ್ತು ಬೆಳಿಯೂರು ಗುತ್ತು ಚಿತ್ರಾ ರೈ ದಂಪತಿ ಪುತ್ರರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ