ಮಕ್ಕಳಲ್ಲಿ ಹುದುಗಿರುವ ಸಾಂಸ್ಕøತಿಕ ಪ್ರತಿಭೆಗಳನ್ನು ತೋರ್ಪಡಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆಯಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಇಂತಹ ಅವಕಾಶವನ್ನು ಪಡೆದುಕೊಳ್ಳಬೇಕು ಎಂದು ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಪ್ರೇಮಲತಾ ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಬಾಯಿಲ ವೀರಕಂಬ ಇಲ್ಲಿ ನಡೆದ ಶಾಲಾ ವಿದ್ಯಾರ್ಥಿಗಳ ಹಾಗೂ ಹಳೆವಿದ್ಯಾರ್ಥಿಗಳ 23ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಅರೆಬೆಟ್ಟ ಜರಿ ಗುತ್ತು ಗಡಿ ಪ್ರದಾನ ದೈವಾರಾಧಕ ರಾದ ಶ್ರೀಯುತ ರತ್ನಾಕರ ಬಂಡಾರಿ ದೀಪ ಬೆಳಗಿಸಿ ಉದ್ಘಾಟಿಸಿದರು .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀಮತಿ ಸುಮಿತ್ರ ಬಾಲಕೃಷ್ಣ ವಹಿಸಿದ್ದರು.ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಜನಾರ್ದನ ಪೂಜಾರಿ ಗೊಳಿಮಾರ್, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಜಯಲಕ್ಷ್ಮಿ ಉಮೇಶ್ ಬಾಯಿಲ, ಶಿಕ್ಷಕ ರಕ್ಷಕ ಸಮಿತಿ ಅಧ್ಯಕ್ಷ ಸುಮಿತ್ರ ಕೇಪುಳ ಕೋಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಉಪಸ್ಥಿತರಿದ್ದರು .
ಶಾಲಾ ಮುಖ್ಯಶಿಕ್ಷಕ ಶ್ರೀಯುತ ವೇಣುಗೋಪಾಲ ಹೊಳ್ಳ 2019ನೇ ಸಾಲಿನ ಶಾಲಾ ವರದಿಯನ್ನು ವಾಚಿಸಿದರು ಶಿಕ್ಷಕಿ ಜೆಸಿಂತಾ ಫ್ಲೇವಿ ಸ್ವಾಗತಿಸಿ, ನಂತರದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಹಾಗೂ ಹಳೆವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು. ಇನ್ನೂ ಕಾರ್ಯಕ್ರಮದ ಪ್ರಾರಂಭಕ್ಕೆ ಮುಂಚೆ ಜೋರಾಗಿ ಮಳೆ ಬಂದು ಕಾರ್ಯಕ್ರಮ ವ್ಯವಸ್ಥೆಗೆ ಅಡಚಣೆ ಆದರೂ ಮಕ್ಕಳ ಹುಮ್ಮಸ್ಸು ಮಾತ್ರ ಕಡಿಮೆಯಾಗಿರಲಿಲ್ಲ