ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ –2019 ರ ವಿಚಾರ ಸಂಕಿರಣ ಕಾರ್ಯಕ್ರಮ- ಕಹಳೆ ನ್ಯೂಸ್
ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ – 2019’ ರ ಕುರಿತು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮವು ದಿನಾಂಕ 23-11-2019 ರಂದು ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಇನ್ನೂ ಕರ್ನಾಟಕ ಹೈಕೋರ್ಟ್ನ ಗೌರವಾನ್ವಿತ ನ್ಯಾಯಾಧೀಶರಾದ ಶ್ರೀ ಅರವಿಂದ್ ಕುಮಾರ್ ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ. ಕೆ.ಕೃಷ್ಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭ ಶಿಕ್ಷಣ ಕ್ಷೇತ್ರದ ಹಲವಾರು ಸಂಪನ್ಮೂಲ ವ್ಯಕ್ತಿಗಳು ತಮ್ಮ ಪ್ರಬಂಧವನ್ನು ಈ ವಿಚಾರ ಸಂಕಿರಣದಲ್ಲಿ ಮಂಡಿಸಲಿದ್ದಾರೆ.
ಆಸಕ್ತರು ಈ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಕಾನೂನು ಕಾಲೇಜಿನ ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆರವೀಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.