Monday, January 20, 2025
ಸುದ್ದಿ

ಕ್ರಿಕೆಟ್ ವಿಚಾರಕ್ಕೆ ಜಗಳವಾಡಿ ವಿದ್ಯಾರ್ಥಿ ಹತ್ಯೆ: ಆರೋಪಿಗಳ ಮೇಲೆ ಪೋಲೀಸ್ ಫೈರಿಂಗ್-ಕಹಳೆ ನ್ಯೂಸ್

ಬೆಂಗಳೂರು: ಕ್ರಿಕೆಟ್ ಆಡುವ ವಿಚಾರದಲ್ಲಿ ಜಗಳವಾಗಿ ವಿದ್ಯಾರ್ಥಿಯ ಹತ್ಯೆ ಮಾಡಿದ್ದ ಆರೋಪಿಗಳ ಮೇಲೆ ಸಿಲಿಕಾನ್ ಸಿಟಿ ಪೋಲೀಸರು ಫೈರಿಂಗ್ ನಡೆಸಿದ್ದಾರೆ.

ಹತ್ಯೆ ಆರೋಪಿಗಳಾದ ಚಂದನ್ ಎಬಿಸಿಡಿ ಚಂದ್ರು ಮತ್ತು ರೋಹಿತ್ ಅವರುಗಳ ಕಾಲಿಗೆ ಪೋಲೀಸರು ಗುಂಡು ಹಾರಿಸಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನವೆಂಬರ್ 21ರಂದು ಉಮಾಮಹೇಶ್ವರ್ ಎಂಬ ವಿದ್ಯಾರ್ಥಿ ಕೊಲೆ ಪ್ರಕರಣದ ಸಂಬಂಧ ಈ ಫೈರಿಂಗ್ ನಡೆದಿದೆ. ಹತ್ಯೆ ನಡೆಸಿದ್ದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ನಂದಿನಿ ಲೇಔಟ್ ಇನ್ಸ್‌ಪೆಕ್ಟರ್ ಲೋಹಿತ್ ಆರೋಪಿಗಳ ಬಂಧನಕ್ಕೆ ತೆರಳಿದಾಗ ಪೋಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಆಗ ಲೋಹಿತ್ ತಮ್ಮ ಆತ್ಮರಕ್ಷಣೆಗಾಗಿ ಫೈರಿಂಗ್ ನಡೆಸಿ ಇಬ್ಬರ ಕಾಲುಗಳಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಪಿಎಸ್‍ಐ ನಿತ್ಯಾನಂದ ಹಾಗೂ ಪೇದೆ ಬಸವಣ್ಣ ಅವರಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.