Sunday, January 19, 2025
ಸುದ್ದಿ

ಕಾಲೇಜು ವಿದ್ಯಾರ್ಥಿನಿ ಅಪಹರಣ, ಚಲಿಸುವ ಕಾರಲ್ಲೇ ಅತ್ಯಾಚಾರ – ಕಹಳೆ ನ್ಯೂಸ್

ಮುಝಫ್ಫರ್‌ ನಗರ: ಕಾಲೇಜು ವಿದ್ಯಾರ್ಥಿನಿಯೊಬ್ಬರನ್ನು ಆಕೆಯ ಸ್ನೇಹಿತರೇ ಅಪಹರಿಸಿ ಚಲಿಸುವ ಕಾರಿನಲ್ಲಿ ಅತ್ಯಾಚಾರ ಎಸಗಿ, ಇಡೀ ಘಟನೆಯನ್ನು ಚಿತ್ರೀಕರಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಮುಖ್ಯ ಆರೋಪಿ ಮುಝಫ್ಫರ್‌ ನಗರದ ಭೋಪಾ ನಿವಾಸಿಯನ್ನು ಬಂಧಿಸಲಾಗಿದೆ. ವಿದ್ಯಾರ್ಥಿನಿಯ ಮಾವ ಈ ಸಂಬಂಧ ನಯಿ ಮಂಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆಯನ್ನು ಚಿತ್ರೀಕರಣ ಮಾಡಿದ ಇಬ್ಬರು ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ, ಅಪರಾಧ ಪಿತೂರಿ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಎಸ್ಪಿ ಸತ್ಪಾನ್ ಅಂತಿಲ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅತ್ಯಾಚಾರಕ್ಕೀಡಾದ ಯುವತಿ ಹಾಗೂ ಆರೋಪಿಗಳು ಚಿರಪರಿಚಿತರಾಗಿದ್ದು, ಫೋನ್ ಮೂಲಕ ನಿಯತವಾಗಿ ಸಂಭಾಷಣೆ ಮಾಡುತ್ತಿದ್ದರು ಎನ್ನುವುದು ತನಿಖೆಯಿಂದ ತಿಳಿದುಬಂದಿದೆ. ಆದರೆ ಬಂದೂಕು ತೋರಿಸಿ ವಿದ್ಯಾರ್ಥಿನಿಯನ್ನು ಅಪಹರಿಸಿ, ಅತ್ಯಾಚಾರ ನಡೆಸಲಾಗಿದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಲಾಗಿದೆ.

ಅತ್ಯಾಚಾರ ಎಸಗಿದ ಬಳಿಕ ಕಾಲೇಜು ಬಳಿ ಆಕೆಯನ್ನು ಬಿಟ್ಟು ಹೋಗಲಾಗಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಆದಾಗ್ಯೂ ಯುವತಿ ಘಟನೆಯನ್ನು ಮನೆಯಲ್ಲಿ ವಿವರಿಸಿದ್ದು, ಆ ಬಳಿಕ ದೂರು ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.