Sunday, January 19, 2025
ಸುದ್ದಿ

ಉರುಳಿ ಬಿದ್ದ ಸರಕಾರಿ ಬಸ್; ಮೃತಪಟ್ಟ ಬಂಟ್ವಾಳದ ಯುವಕ – ಕಹಳೆ ನ್ಯೂಸ್

ಹಾಸನ: ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆ ಬಸ್ ರಸ್ತೆಗೆ ಉರುಳಿ ಬಿದ್ದು ಓರ್ವ ಸಾವನ್ನಪ್ಪಿ ಸುಮಾರು 25 ಮಂದಿ ಗಾಯಗೊಂಡ ಘಟನೆ ಚನ್ನರಾಯಪಟ್ಟಣದ ಹಿರೇಸಾವೆಯಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಮಣಿ ಅಭಿಷೇಕ್ (28) ಮೃತ ದುರ್ದೈವಿ. 25 ಮಂದಿ ಗಾಯಗೊಂಡಿದ್ದಾರೆ. ಬಸ್ ನಲ್ಲಿ ಸುಮಾರು 46 ಪ್ರಯಾಣಿಕರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನಿಂದ ಬೆಂಗಳೂರಿಗೆ ಸಾಗುತ್ತಿದ್ದ ಬಸ್ ಹಿರೆಸಾವಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಈ ವೇಳೆ ಇನ್ನೋವಾ ಕಾರಿಗೂ ಡಿಕ್ಕಿ ಹೊಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರೆಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.