Sunday, November 24, 2024
ಸುದ್ದಿ

ಫಿಲೋಮಿನಾ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದಿಂದ ‘ಹದಿಹರೆಯ ಮತ್ತು ಆರೋಗ್ಯ’ ಮಾಹಿತಿ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಹದಿಹರೆಯದ ವಯಸ್ಸಿನಲ್ಲಿ ಮಕ್ಕಳು ಮಾನಸಿಕ ಒತ್ತಡ ಮತ್ತು ಆರೋಗ್ಯದಲ್ಲಿ ಏರುಪೇರಾಗುವ ಸನ್ನಿವೇಶಗಳನ್ನು ಎದುರಿಸುತ್ತಾರೆ.

ಈ ಸಂದರ್ಭದಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವುದರಿಂದ ಪರಿಸ್ಥಿತಿಯನ್ನು ಹತೋಟಿಯಲ್ಲಿಟ್ಟುಕೊಳ್ಳಬಹುದು ಎಂದು ಪುತ್ತೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಆರತಿ ಹೇಳಿದರು.
ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ಗ್ರಾಮ ಪಂಚಾಯತ್ ನರಿಮೊಗರು, ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನರಿಮೊಗರು ಇದರ ಜಂಟಿ ಆಶ್ರಯದಲ್ಲಿ ಶಾಲಾ ಸಭಾಂಗಣದಲ್ಲಿ ‘ಹದಿಹರೆಯ ಮತ್ತು ಆರೋಗ್ಯ’ ಕುರಿತು ನವೆಂಬರ್ 13 ರಂದು ಆಯೋಜಿಸಲಾದ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಹದಿಹರೆಯದಲ್ಲಿ ಪೌಸ್ಟಿಕ ಆಹಾರ ಸೇವೆನೆಯು ಆರೋಗ್ಯ ಮತ್ತು ದೈಹಿಕ ಬೆಳವಣಿಗೆಯನ್ನು ನಿರ್ಧರಿಸುತ್ತದೆ. ಆರೋಗ್ಯ ಸಮಸ್ಯೆ ಎದುರಾದಾಗ ಪೋಷಕರು ಸೂಕ್ತ ಮಾರ್ಗದರ್ಶನ ಮತ್ತು ಚಿಕಿತ್ಸೆಯನ್ನು ಕೊಡಿಸಬೇಕು. ಮಕ್ಕಳಿಗೆ ತಮ್ಮ ಆರೋಗ್ಯದ ಕುರಿತು ಸರಿಯಾದ ಜಾಗೃತಿಯ ಅಗತ್ಯವೂ ಇರುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಉಹಿಪ್ರಾ ಶಾಲೆ ನರಿಮೊಗರು ಇದರ ಎಸ್‍ಡಿಎಮ್‍ಸಿ ಅಧ್ಯಕ್ಷ ಕೃಷ್ಣರಾಜ ಡಿ ವಹಿಸಿದ್ದರು. ಗೌರವ ಅತಿಥಿಗಳಾಗಿ ಗ್ರಾಮ ಪಂಚಾಯತ್ ನರಿಮೊಗರು ಇದರ ಅಧ್ಯಕ್ಷೆ ಚಂದ್ರಕಲಾ, ಉಪಾಧ್ಯಕ್ಷೆ ರವೀಂದ್ರ ರೈ, ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಸಂಯೋಜಕಿ ಶ್ರೀಮಣಿ, ನರಿಮೊಗರಿನ ಆಶಾ ಕಾರ್ಯಕರ್ತೆ ಸುಲೋಚನಾ, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಜುಸ್ತಿನಾ ಲಿಡ್ವಿನ್ ಡಿ’ಸೋಜಾ ಮತ್ತು ನರಿಮೊಗರು ಅಂಗನವಾಡಿ ಕಾರ್ಯಕರ್ತೆ ಮಮತಾ ಉಪಸ್ಥಿತರಿದ್ದರು. ಎಮ್‍ಎಸ್‍ಡಬ್ಯೂ ವಿದ್ಯಾರ್ಥಿನಿಯರಾದ ಶಿಲ್ಪ ಸ್ವಾಗತಿಸಿ, ರಮ್ಯ ವಂದಿಸಿ, ಶೈನಿ ಮತ್ತು ಮೇಘಶ್ರೀ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು