Wednesday, January 22, 2025
ಸುದ್ದಿ

ಟ್ಯಾಂಕರ್- ಬಸ್ ಡಿಕ್ಕಿ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ – ಕಹಳೆ ನ್ಯೂಸ್

ಟ್ಯಾಂಕರ್- ಬಸ್ ಡಿಕ್ಕಿ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ವಿಜಯಪುರ: ಜಿಲ್ಲೆಯ ಸಿಂದಗಿ ಬಳಿ ಟ್ಯಾಂಕರ್ ಹಾಗೂ ಸಾರಿಗೆ ಸಂಸ್ಥೆ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಬುಧವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಬಸ್ ನಲ್ಲಿ ವಿವಿಧ ಕಾಲೇಜಿಗೆ ಹೊರಟಿದ್ದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಸಿಂದಗಿ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 218 ಸಂಭವಿಸದ ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರ ಗಾಯಗೊಂಡಿರುವ ಕೆಲವರನ್ನು ವಿಜಯಪುರ ಸರಕಾರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಲಬುರಗಿ ಜಿಲ್ಲೆಯ ಜೇವರ್ಗಿಯಿಂದ ಸಿಂದಗಿ ಕಡೆಗೆ ಹೊರಟಿದ್ದ ಬಸ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಕಾರಣ ಅಪಘಾತ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ಜರಗಿದೆ.