Recent Posts

Monday, January 20, 2025
ಸುದ್ದಿ

ಪ್ರೀತಿ ಒಪ್ಪಿಕೊಳ್ಳದ ಯುವತಿಗೆ ಪ್ರೇಮಿಯೊಬ್ಬ ಮಾಡಿದ್ದೇನು ಗೊತ್ತಾ- ಕಹಳೆ ನ್ಯೂಸ್

ಲಕ್ನೋ : ತನ್ನ ಪ್ರೀತಿಯನ್ನು ಒಪ್ಪಿಕೊಳ್ಳದೆ ಬೇರೆ ಯುವಕನೊಂದಿಗೆ ಮದುವೆಯಾಗುವುದಕ್ಕೆ ಮುಂದಾದ ಯುವತಿಯನ್ನು ಭಗ್ನ ಪ್ರೇಮಿಯೊಬ್ಬ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಅಲೀಘರ್ ಜಿಲ್ಲೆಯ ಇಗ್ಲಾಸ್ ನಲ್ಲಿ ನಡೆದಿದೆ.

ಮೃತಪಟ್ಟ ಯುವತಿಗೆ ಡಿಸೆಂಬರ್ 15ರಂದು ಮದುವೆ ನಿಶ್ಚಯವಾಗಿತ್ತು. ಆದರೆ ನೆರೆಮನೆಯಾತ ಆಕೆಯನ್ನು ಪ್ರೀತಿಸುತ್ತಿದ್ದು, ಆದರೆ ಯುವತಿ ಆತನನ್ನು ಪ್ರೀತಿಸುತ್ತಿರಲಿಲ್ಲ. ಆದಕಾರಣ ಯುವತಿ ಮನೆಯವರು ಆಕೆಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯಮಾಡಿದ್ದಾರೆ. ಇದರಿಂದ ಕೋಪಗೊಂಡ ಪ್ರೇಮಿ ಮನೆಯಲ್ಲಿ ಯಾರು ಇಲ್ಲದ ವೇಳೆ ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆಗೆ ಸಂಬಂಧಿಸಿದಂತೆ ಯುವತಿ ಮನೆಯವರು ನೆರೆಮನೆಯ ಯುವಕನ ವಿರುದ್ಧ ಅಲೀಘರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿ ಹುಡುಕಾಟಕ್ಕಾಗಿ ಎರಡು ತಂಡಗಳನ್ನು ರಚಿಸಿ ಶೋಧ ಕಾರ್ಯ ಶುರುಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು