Tuesday, January 21, 2025
ಸುದ್ದಿ

ಡ್ರಾಪ್ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ವಿದ್ಯಾರ್ಥಿನಿ ಕರೆದೊಯ್ದು ಅತ್ಯಾಚಾರ – ಕಹಳೆ ನ್ಯೂಸ್

ಡ್ರಾಪ್ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ವಿದ್ಯಾರ್ಥಿನಿ ಕರೆದೊಯ್ದು ಅತ್ಯಾಚಾರ

ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ವಿದ್ಯಾರ್ಥಿನಿ ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ಕೋಲಾರ ತಾಲೂಕಿನ ಇರಗಸಂದ್ರ ಗ್ರಾಮದ ಬಳಿ ನಡೆದಿದೆ.

ಕಾಲೇಜ್ ನಿಂದ ಮನೆಗೆ ತೆರಳಲು ನಿಂತಿದ್ದ ವಿದ್ಯಾರ್ಥಿನಿಯನ್ನು ಮನೆಗೆ ಬಿಡುವುದಾಗಿ ಬೈಕ್ ನಲ್ಲಿ ಕರೆದುಕೊಂಡು ಹೋದ ಕಾಮುಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನ ವಿರುದ್ಧ ವೇಮಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು