Saturday, November 23, 2024
ಸುದ್ದಿ

ಪಶುವೈದ್ಯೆ ಅತ್ಯಾಚಾರ, ಕೊಲೆ; ಮೂವರು ಪೊಲೀಸರ ಅಮಾನತು – ಕಹಳೆ ನ್ಯೂಸ್

ಪಶುವೈದ್ಯೆ ಅತ್ಯಾಚಾರ, ಕೊಲೆ; ಮೂವರು ಪೊಲೀಸರ ಅಮಾನತು

ಹೈದರಾಬಾದ್, ಡಿಸೆಂಬರ್ 01 : ಹೈದರಾಬಾದ್‌ನಲ್ಲಿ ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂತ್ರಸ್ತೆ ಪ್ರಿಯಾಂಕ ರೆಡ್ಡಿ ಕುಟುಂಬದವರು ರಾತ್ರಿಯೇ ದೂರು ಸಲ್ಲಿಸಿದರೂ ಎಫ್‌ಐಆರ್ ದಾಖಲು ಮಾಡಲು ವಿಳಂಬ ಮಾಡಿದ ಕಾರಣಕ್ಕೆ ಮೂವರನ್ನು ಅಮಾನತುಗೊಳಿಸಲಾಗಿದೆ. ಅತ್ಯಾಚಾರ, ಹತ್ಯೆ ಮಾಡಿದ ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವೈದ್ಯೆ ಅತ್ಯಾಚಾರ: ಆರೋಪಿಗಳ ಪರವಾಗಿ ವಾದಿಸದಿರಲು ವಕೀಲರ ನಿರ್ಧಾರ

ಪ್ರಿಯಾಂಕ ರೆಡ್ಡಿ ಫೋನ್ ಸ್ವಿಚ್ ಆಫ್ ಆಗುತ್ತಿದ್ದಂತೆ ಆಕೆಯ ತಂಗಿ ಮತ್ತು ಕುಟುಂಬದವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ, ಎಫ್‌ಐಆರ್ ದಾಖಲು ಮಾಡಿಕೊಳ್ಳಲು ಪೊಲೀಸರು ವಿಳಂಬ ಮಾಡಿದರು.

ತೆಲಂಗಾಣ ಅತ್ಯಾಚಾರ ಪ್ರಕರಣ: ಒಂದು ಗಂಟೆಯಲ್ಲೇ ಅದೆಲ್ಲಾ ಮುಗಿದಿತ್ತು

ಸೈಬರಾಬಾದ್ ಪೊಲೀಸ್ ಆಯುಕ್ತ ವಿ. ಸಿ. ಸಜ್ಜನರ್ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶ ತನಕ ಅವರು ಕರ್ತವ್ಯಕ್ಕೆ ಹಾಜರಾಗುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.

ಪ್ರಿಯಾಂಕಾ ರೆಡ್ಡಿ ಅತ್ಯಾಚಾರ, ಹತ್ಯೆ: ಆ ಕರಾಳ ರಾತ್ರಿ ನಡೆದಿದ್ದೇನು?

ಹೈದರಾಬಾದ್‌ನ ಪಶುವೈದ್ಯ 27 ವರ್ಷದ ಪ್ರಿಯಾಂಕ ರೆಡ್ಡಿ ಬುಧವಾರ ರಾತ್ರಿ ನಾಪತ್ತೆಯಾಗಿದ್ದರು. ಗುರುವಾರ ಅವರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪ್ರಿಯಾಂಕ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿ ಸುಟ್ಟು ಹಾಕಲಾಗಿತ್ತು.

ದೇಶಾದ್ಯಂತ ಪ್ರಿಯಾಂಕ ಹತ್ಯೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರ ವಶದಲ್ಲಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಲಾಗುತ್ತಿದೆ. ಆರೋಪಿಗಳ ಪರವಾಗಿ ವಕಾಲತ್ತು ವಹಿಸುವುದಿಲ್ಲ ಎಂದು ವಕೀಲರು ತೀರ್ಮಾನಿಸಿದ್ದಾರೆ.