ಪುತ್ತೂರು: ನಾವು ಮಾಡುವ ಪ್ರತಿಯೊಂದು ಕೆಲಸದ ಹಿಂದೆ ಬಲವಾದ ಉದ್ದೇಶ ಇದ್ದೇ ಇರುತ್ತದೆ. ಆದರೆ ಅದನ್ನು ಗಣನೆಗೆ ತಗೆದುಕೊಳ್ಳದೆ ಕೆಲಸ ಮಾಡುತ್ತೇವೆ. ಪ್ರತಿಯೊಂದು ಕೆಲಸ ನಮಗೆ ಫಲಕೊಡಬೇಕಾದರೆ ಮಾಡುವ ಕೆಲಸದಲ್ಲಿ ಶ್ರದ್ಧೆ, ಭಕ್ತಿ ಇರಬೇಕು ಎಂದು ಮೂಡಂಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಅರವಿಂದ ಕುಡ್ಲ ಹೇಳಿದರು.
ಅವರು ಸಾಜ ಸರಕಾರಿ ಪರಿಶಿಷ್ಟ ವರ್ಗಗಳ ಆಶ್ರಮ ಶಾಲೆಯಲ್ಲಿ ನಡೆಯುತ್ತಿರುವ ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ‘ಚಿತ್ರಗ್ರಹಣ’ ಎಂಬ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಗಳಾಗಿ ಶುಕ್ರವಾರ ಮಾತನಾಡಿದರು.
ನಾವು ಕಾಣುವಂತಹ ಕನಸುಗಳು ಭವಿಷ್ಯಕ್ಕೆ ಪೂರಕವಾಗುವಂತಿರಬೇಕು. ಕಂಡಂತಹ ಕನಸುಗಳನ್ನು ನನಸಾಗಿಸುವಾಗ ಜೀವನಕ್ಕೆ ಬೇಕಾದ ಎಲ್ಲಾ ಪಾಠಗಳನ್ನು ಕಲಿಯುತ್ತೇವೆ. ಹಾಗೆಯೇ ಚಿತ್ರಗ್ರಹಣವು ಇಂದು ಹಲವು ಮಂದಿಗೆ ಹವ್ಯಾಸವಾಗಿದೆ. ಇಂತಹ ಹವ್ಯಾಸವೇ ಹಲವರ ಜೀವನಕ್ಕೆ ದಾರಿದೀಪವಾಗಿದೆ ಎಂದರಲ್ಲದೆ ಮೊಬೈಲ್ ಅನ್ನು ನಾವು ಬಳಸಬೇಕೇ ಹೊರತು ಮೊಬೈಲ್ ನಮ್ಮನ್ನು ಬಳಸಬಾರದು. ಏಕೆಂದರೆ ಗುರಿಯನ್ನು ಸಾಧಿಸುವಲ್ಲಿ ನಮ್ಮನ್ನು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಆಗ ಮಾತ್ರ ಬದುಕಿನ ಚಿತ್ರಣ ಮೂಡುತ್ತದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ರೋಟರಿ ಸೆಂಟ್ರಲ್ ಪುತ್ತೂರಿನ ಅಧ್ಯಕ್ಷ ರೋ.ಸಂತೋಷ್ ಶೆಟ್ಟಿ ಸಾಜ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಸೇವಾ ಮನೋಭಾವನೆಯಿಂದ ತೊಡಗಿಸಿಕೊಳ್ಳಬೇಕು. ಶಿಬಿರದಲ್ಲಿ ಕಲಿತ ಅನುಭವದ ಪಾಠಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಯಶಸ್ಸು ಸಾಧ್ಯ ಎಂದು ಹೇಳಿದರು.
ವೇದಿಕೆಯಲ್ಲಿ ಪುತ್ತೂರು ಕಂದಾಯ ಇಲಾಖೆಯ ನಿವೃತ್ತ ಅಧಿಕಾರಿ ನಾರಾಯಣ ನಾಯ್ಕ ಅಂಬಟೆತ್ತಡ್ಕ, ಬಲ್ನಾಡು ಗ್ರಾ.ಪಂ. ಸದಸ್ಯ ಟಿ. ಇದ್ದುಕುಂಞÂ ಹಾಜಿ, ದೈವ ನರ್ತಕ ಕುಟ್ಟಿ ನಲಿಕೆಕೂಟೇಲು, ಆರ್ಯಾಪು ಗ್ರಾಮ ಸಹಾಯಕ ಉಮೇಶ್ ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾರ್ಥಿಗಳಾದ ಧನ್ಯಶ್ರೀ, ರಶ್ಮಿಕಾ, ಧನ್ಯಶ್ರೀ ಪ್ರಾರ್ಥಿಸಿದರು. ಶಿಬಿರಾರ್ಥಿ ಮಲ್ಲಿಕಾ ಸ್ವಾಗತಿಸಿ, ಆತ್ಮಿಕಾ ವಂದಿಸಿದರು. ಶಿಬಿರಾರ್ಥಿ ಅಕ್ಷಯ್ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು.
You Might Also Like
ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಿದ ಶಾಸಕ ವೇದವ್ಯಾಸ್ ಕಾಮತ್-ಕಹಳೆ ನ್ಯೂಸ್
ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ...
ಕತಾರಿನಲ್ಲಿ ಭಾರತೀಯರಿಂದ ಆಯುರ್ವೇದ ದಿನಾಚರಣೆ-ಕಹಳೆ ನ್ಯೂಸ್
ಭಾರತೀಯ ದೂತವಾಸದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರವು ಆಯುರ್ವೇದ ದಿನಾಚರಣೆಯನ್ನು ಆಚರಿಸಿತು. ಭಾರತೀಯ ದೂತವಾಸದ ಉಪಮುಖ್ಯಸ್ಥರಾದ ಶ್ರೀ ಸಂದೀಪ್ ಕುಮಾರ್ ಈ ಕಾರ್ಯಕ್ರಮದ. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು....
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಫುಡ್ ಫೆಸ್ಟ್-ಕಹಳೆ ನ್ಯೂಸ್
ಪುತ್ತೂರು; ದೂರದೃಷ್ಟಿ, ಕಠಿಣ ಪರಿಶ್ರಮಗಳೇ ಯಶಸ್ಸಿನ ಮೆಟ್ಟಿಲು. ಅವಕಾಶಗಳು ಸಿಕ್ಕಾಗಲೆಲ್ಲಾ ನಿಮ್ಮ ಗುರಿಯನ್ನು ತಲುಪಲು ಅವುಗಳನ್ನು ಬಳಸಿಕೊಳ್ಳಿ’ ಎಂದು ಮಂಗಳೂರಿನ ವಾಣಿಜ್ಯೋದ್ಯಮಿ ಶ್ರೀ ವಿಜಿತ್ ಶೆಟ್ಟಿ ಅವರು...
ಸುಬ್ರಹ್ಮಣ್ಯದ ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲ್ ವಿಕ್ರಂ ಗೌಡ ಮತ್ತು ತಂಡ-ಕಹಳೆ ನ್ಯೂಸ್
ಉಡುಪಿ: ಕಾಡಿನಲ್ಲಿಯೇ ಸುತ್ತಾಡುವ ನಕ್ಸಲರು ಕೆಲವು ಸಮಯದ ಹಿಂದೆ ರೈಲಿನ ಮೂಲಕ ಪ್ರಯಾಣಿಸಿದ್ದರು ಎಂಬ ಮಾಹಿತಿ ಈಗ ಹೊರಗೆ ಬಿದ್ದಿದೆ. ಎನ್ಕೌಂಟರ್ಗೆ ಬಲಿಯಾದ ನಕ್ಸಲ್ ವಿಕ್ರಂ ಗೌಡ ಮತ್ತು ತಂಡ ಸುಬ್ರಹ್ಮಣ್ಯದಿಂದ ಮುರ್ಡೇಶ್ವರ ವರೆಗೆ ರೈಲಿನಲ್ಲಿ ಹೋಗಿ ಅನಂತರ ಕಾಡು ಹಾದಿ ಹಿಡಿದಿದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಲೋಕಸಭೆ ಚುನಾವಣೆ ಸನಿಹದಲ್ಲಿ ಎಲ್ಲೆಡೆ ಹೆಚ್ಚುವರಿ ಭದ್ರತೆ ಇದ್ದುದರಿಂದ ದಕ್ಷಿಣ ಕನ್ನಡ, ಕೊಡಗು ಗಡಿಭಾಗ ಕೂಜುಮಲೆ, ಕಡಮಕಲ್ಲು , ಸುಬ್ರಹ್ಮಣ್ಯ, ಬಿಳಿನೆಲೆ ಭಾಗದಲ್ಲಿ ಹೆಚ್ಚಿನ ದಿನಗಳನ್ನು ನಕ್ಸಲರು ಕಳೆದಿದ್ದರು. ಈ ವೇಳೆ ಇಲ್ಲಿನ ಅರಣ್ಯದಂಚಿನ ಮನೆಗಳಿಗೆ ಭೇಟಿ ನೀಡಿ ದಿನಸಿ ಹಾಗೂ ಇನ್ನಿತರ ಸಾಮಗ್ರಿಗಳನ್ನು ಕೊಂಡೊಯ್ದಿದ್ದರು. ಅಲ್ಲಿಂದ ಪಕ್ಕದ ಸುಬ್ರಹ್ಮಣ್ಯ ಕ್ರಾಸಿಂಗ್ ರೋಡ್(ನೆಟ್ಟಣ) ರೈಲು ನಿಲ್ದಾಣಕ್ಕೆ ಆಗಮಿಸಿ ರೈಲಿನ ಮೂಲಕ ಮುರ್ಡೇಶ್ವರ ಕಡೆಗೆ ಪ್ರಯಾಣಿಸಿದ್ದರು. ಮುರ್ಡೇಶ್ವರ ರೈಲು ನಿಲ್ದಾಣದಲ್ಲಿ ಇಳಿದು ಕಾಡು ಹತ್ತಿದ್ದ ಅವರು ಕೊಲ್ಲೂರು...