ಪೊಲೀಸರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ ವ್ಯಕ್ತಿಗೆ ಗುಂಡೇಟು
ಬೆಂಗಳೂರು, ಡಿಸೆಂಬರ್ 2: ಪೊಲೀಸರಿಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದ ರೌಡಿಗಳಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.
ಕೆಲವು ದಿನಗಳ ಬಳಿಕ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಎರಡು ದಿನಗಳ ಹಿಂದಷ್ಟೇ ಪೊಲೀಸರೊಬ್ಬರಿಗೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಗಾಯಗೊಳಿಸಿದ್ದ.
ಅಮೆರಿಕದಲ್ಲಿ ಅಪರಿಚಿತ ವ್ಯಕ್ತಿಯ ಗುಂಡೇಟಿಗೆ ಬಲಿಯಾದ ಮೈಸೂರಿನ ಯುವಕ
ಬೆಳಗಿನ ಜಾವ ಸುಮಾರು 4 ಗಂಟೆಯ ವೇಳೆ ಪೊಲೀಸರು ಆತನನ್ನು ಹಿಡಿಯಲು ತೆರಳಿದ್ದಾಗ, ಮತ್ತೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ, ಆತ್ಮ ರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ.
ಮೊದಲು ಗಾಳಿಯಲ್ಲಿ ಗುಂಡು ಹಾರಿಸಲಾಯಿತು, ಆದರೂ ಯಾವುದಕ್ಕೂ ರೌಡಿ ಬಗ್ಗದ ಕಾರಣ ಮತ್ತೆ ಹಲ್ಲೆಗೆ ಮುಂದಾದ ಕಾರಣ ಗುಂಡು ಹಾರಿಸಿದ್ದಾರೆ.
ಈ ವೇಳೆ ಆರೋಪಿ ಕಾಲಿಗೆ ಎರಡು ಗುಂಡು ಬಿದ್ದಿದ್ದು, ಸದ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗುಂಡೇಟು ತಿಂದ ಆರೋಪಿಯನ್ನು ಮರ್ಧಾನ್ ಖಾನ್ ಎಂದು ಗುರುತಿಸಲಾಗಿದೆ. ಈತ ಎರಡು ದಿನಗಳ ಹಿಂದೆ ನಗರದಲ್ಲಿ ಗಲಾಟೆ ಮಾಡಿದ್ದನು. ಪುಂಡ ಯುವಕರನ್ನ ಹಿಡಿಯಲು ಹೋದಾಗ ಪಿಸಿ ನಾಗರಾಜುಗೆ ಚಾಕು ಹಾಕಿ ಈತ ಎಸ್ಕೇಪ್ ಆಗಿದ್ದನು.
ಆದರೂ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆರ್.ಟಿ ನಗರ ಇನ್ಸ್‌ಪೆಕ್ಟರ್ ಮಿಥುನ್ ಶಿಲ್ಪಿ ಅವರು ಫೈರಿಂಗ್ ಮಾಡಿದ್ದಾರೆ.