Recent Posts

Monday, January 20, 2025
ಸುದ್ದಿ

ಕಲ್ಲಡ್ಕ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಸ್ವಚ್ಛತೆ ,ತ್ಯಾಜ್ಯ ನಿರ್ವಹಣೆ ಹಾಗೂ ಪ್ಲಾಸ್ಟಿಕ್ ಮುಕ್ತ ಜಾಗೃತಿ ಬೀದಿ ನಾಟಕ -ಕಹಳೆ ನ್ಯೂಸ್

ಕಲ್ಲಡ್ಕ ಡಿಸೆಂಬರ್ 3, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ವೀರಕಂಭ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಪಿಂಗಾರ ಕಲಾಸಂಘ( ರಿ) ಕೈಕಂಬ ಮಂಗಳೂರು ಇವರಿಂದ ಸ್ವಚ್ಛತೆ ,ತ್ಯಾಜ್ಯ ನಿರ್ವಹಣೆ ಹಾಗೂ ಪ್ಲಾಸ್ಟಿಕ್ ಮುಕ್ತ ಜಾಗೃತಿ ಬೀದಿ ನಾಟಕ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮಜಿ ಶಾಲಾ ಮುಖ್ಯಶಿಕ್ಷಕ ಶ್ರೀಯುತ ನಾರಾಯಣ ಪೂಜಾರಿ ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿ ಕೆ ಅಬ್ಬಸ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಿರಿಜಾ, ಗ್ರಾಮ ಪಂಚಾಯತ್ ಸದಸ್ಯ ಶ್ರೀಮತಿ ಜಯಂತಿ ಜನಾರ್ಧನ್, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಗ್ರಾಮ ವ್ಯಾಪ್ತಿಯ ಮೂರು ಸರಕಾರಿ ಶಾಲೆಗಳಾದ ಮಜಿ, ಕೆಲಿಂಜ ಹಾಗೂ ಬಾಯಿಲ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕಿಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು