Recent Posts

Monday, January 20, 2025
ಸುದ್ದಿ

BREAKING NEWS:ಉಪ್ಪಿನಂಗಡಿ ಸರಕಾರಿ ಕಾಲೇಜು ವಿದ್ಯಾರ್ಥಿ ಪ್ರಥಮ್ ಕೊಂಡೆ ಆತ್ಮಹತ್ಯೆ-ಕಹಳೆ ನ್ಯೂಸ್

ಉಪ್ಪಿನಂಗಡಿ, ಡಿ.6: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಕ್ಕಾರು ಎಂಬಲ್ಲಿ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಮರಮೆ ಮನೆ ನಿವಾಸಿ ಪ್ರಥಮ್ ಕೊಂಡೆ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇವರು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ರಾತ್ರಿ ಮನೆಯಲ್ಲಿದ್ದ ಇವರು ಬೆಳಗ್ಗೆ ಮನೆಯ ಬಳಿಯ ಮಾವಿನಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು