ರಾಜ್ಯದ ಜನತೆಗೆ ಬಿಗ್ ‘ಶಾಕಿಂಗ್ ನ್ಯೂಸ್’: ಭಾರತದಲ್ಲಿ ಡೆಂಗ್ಯೂ ಪ್ರಕರಣಗಳ ಪಟ್ಟಿಯಲ್ಲಿ ‘ಕರ್ನಾಟಕಕ್ಕೆ ಅಗ್ರಸ್ಥಾನ’- ಕಹಳೆ ನ್ಯೂಸ್
ಬೆಂಗಳೂರು: ಭಾರತದಲ್ಲಿ ಗರಿಷ್ಠ ಸಂಖ್ಯೆಯ ಡೆಂಗ್ಯೂ ಪ್ರಕರಣಗಳನ್ನು ಕರ್ನಾಟಕ ರಾಜ್ಯ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ ಎನ್ನಲಾಗಿದೆ. ಒಟ್ಟಾರೆಯಾಗಿ, ದಕ್ಷಿಣ ಭಾರತದ ಆರು ರಾಜ್ಯಗಳಲ್ಲಿ ಅಕ್ಟೋಬರ್ ವರೆಗೆ 35,000 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.
ಸಂಸತ್ತಿನ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಸರ್ಕಾರ ನೀಡಿದ ಉತ್ತರ ನೀಡಿದ್ದು, ಅದರಂತೆ ಕರ್ನಾಟಕದಲ್ಲಿ 14,000 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಇದು ದೇಶದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ.
ಕರ್ನಾಟಕ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶ ಸೇರಿದಂತೆ ದಕ್ಷಿಣ ಭಾರತದ ಆರು ರಾಜ್ಯಗಳಲ್ಲಿ 36 ಕ್ಕೂ ಹೆಚ್ಚು ಜನರು ಡೆಂಗ್ಯೂ ರೋಗದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಕ್ಟೋಬರ್ ವರೆಗೆ ಭಾರತದಾದ್ಯಂತ ಸೊಳ್ಳೆಯಿಂದ ಹರಡುವ ಉಷ್ಣವಲಯದ 91,000 ಪ್ರಕರಣಗಳು ದಾಖಲಾಗಿವೆ ಎಂದು ಅಂಕಿ ಅಂಶಗಳು ತಿಳಿಸಿವೆ. ನವೆಂಬರ್ ಮತ್ತು ಡಿಸೆಂಬರ್‌ನ ಡೇಟಾ ಬಂದಾಗ ಈ ಸಂಖ್ಯೆ ಏರಿಕೆಯಾಗಬಹುದು ಎಂದು ಹೇಳಲಾಗಿದೆ. ಕಳೆದ ವರ್ಷ ಕರ್ನಾಟಕದಲ್ಲಿ 4,000 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಆತಂಕಕಾರಿಯಾಗಿ, 2019 ರಲ್ಲಿ ಶೇಕಡಾ 70 ಪ್ರಕರಣಗಳು ಬೆಂಗಳೂರಿನಲ್ಲಿ ಒಂದರಲ್ಲೇ ದಾಖಲಾಗಿದೆ. ದೇಶಾದ್ಯಂತ 82 ಸಾವುಗಳಲ್ಲಿ, ಕೇರಳ ಮತ್ತು ಕರ್ನಾಟಕದಲ್ಲಿ ಕ್ರಮವಾಗಿ 16 ಮತ್ತು 13 ಸಾವುಗಳು ಸಂಭವಿಸಿವೆ. ದಕ್ಷಿಣ ಭಾರತದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಲು ನಿರಾಸಕ್ತಿ ಮತ್ತು ಸೊಳ್ಳೆ ಸಂತಾನೋತ್ಪತ್ತಿ ಸ್ಥಳಗಳನ್ನು ನಿಯಂತ್ರಿಸುವಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಇಲ್ಲದಿರುವುದು
ದಕ್ಷಿಣ ಭಾರತದಲ್ಲಿ ಡೆಂಗ್ಯೂ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ.