ಉಪ್ಪಿನಂಗಡಿ ಮತ್ತು ಹಿರೇಬಂಡಾಡಿ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ಕಿಂಡಿ ಆಣೆಕಟ್ಟು ಉದ್ಘಾಟನಾ ಕಾರ್ಯಕ್ರಮ- ಕಹಳೆ ನ್ಯೂಸ್
ಸಣ್ಣ ನೀರಾವರಿ ಇಲಾಖೆಯ ರೂ.1.25 ಕೋಟಿ ಅನುದಾನದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರ ಪರಿಶ್ರಮದಿಂದ ಅನುದಾನ ಬಿಡುಗಡೆಗೆ ಸಹಕರಿಸಿ ಉಪ್ಪಿನಂಗಡಿ ಗ್ರಾಮದ ನಾಲಯದಗುಂಡಿ ಎಂಬಲ್ಲಿ ನಿರ್ಮಿಸಲಾಗಿರುವ ಉಪ್ಪಿನಂಗಡಿ ಮತ್ತು ಹಿರೇಬಂಡಾಡಿ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ಸಮೇತ ಹಿಂದಿ ಅಣೆಕಟ್ಟು ಇದರ ಉದ್ಘಾಟನೆಯನ್ನು ರಾಜ್ಯ ಸಣ್ಣ ನೀರಾವರಿ ಇಲಾಖೆ ಸಚಿವರಾದ ಶ್ರೀ ಜೆ.ಸಿ.ಮಾಧುಸ್ವಾಮಿ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ತಿಪಟೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಬಿ.ಸಿ.ನಾಗೇಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶಯನಾ ಜಯಾನಂದ, ತಾಲೂಕು ಪಂಚಾಯತ್ ಸ್ಥಾಯಿ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಲಲಿತಾ ಈಶ್ವರ್, ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಮೀನಾಕ್ಷಿ ಮಂಜುನಾಥ, ಶ್ರೀ ಹರೀಶ್ ಬಿಜಾತ್ರೆ, ಮುಕುಂದ ಬಜತ್ತೂರು, ಶ್ರೀಮತಿ ಸುಜಾತ ಕೃಷ್ಣ, ಭಾರತೀಯ ಜನತಾ ಪಾರ್ಟಿ ಪುತ್ತೂರು ಮಂಡಲ ಅಧ್ಯಕ್ಷರಾದ ಶ್ರೀ ಚನಿಲ ತಿಮ್ಮಪ್ಪ ಶೆಟ್ಟಿ, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಅಬ್ದುಲ್ ರಹಿಮಾನ್, ಹಿರೆಬಂಡಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಶೌಕತ್ ಅಲಿ, ಗ್ರಾಮ ಪಂಚಾಯತ್ ಸದಸ್ಯರುಗಳು, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಗಣ್ಯರು ಉಪಸ್ಥಿತರಿದ್ದರು.